Saturday, April 6, 2024

ಕಡಬ: ಚೇರು ಪ್ರದೇಶದ ಮನೆಗೆ ಶಂಕಿತರ ಭೇಟಿ : ಊಟ ಮಾಡಿ, ಸಾಮಗ್ರಿ ಪಡೆದು ತೆರಳಿದ ಶಂಕಿತರು

ಸುಬ್ರಹ್ಮಣ್ಯ: ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಗುರುವಾರ ರಾತ್ರಿ ವೇಳೆ ಶಂಕಿತರ ತಂಡ ಆಗಮಿಸಿ ಊಟ, ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದು ತೆರಳಿರುವ ವಿಷಯ ಶುಕ್ರವಾರ ಸಂಜೆ ವೇಳೆಗೆ ಬೆಳಕಿಗೆ ಬಂದಿದೆ.

ತಾಲೂಕಿನ ಕೊಂಬಾರು ಗ್ರಾಮದ ಚೇರು ಪ್ರದೇಶದ ಮನೆಯೊಂದಕ್ಕೆ ಶಂಕಿತರು ಭೇಟಿ ನೀಡಿದ್ದಾರೆ ಎನ್ನಲಾಗಿದೆ.

ಗುರುವಾರ ಸಂಜೆ ಏಳು ಗಂಟೆ ವೇಳೆ ತಂಡ ಮನೆಗೆ ಆಗಮಿಸಿ ಊಟ ಮಾಡಿದ್ದು, ಸುಮಾರು ಒಂಬತ್ತು ಗಂಟೆ ವೇಳೆ ದಿನಸಿ ಸಾಮಾಗ್ರಿಗಳನ್ನು ಪಡೆದು ತೆರಳಿದ್ದಾರೆ ಎಂದು ತಿಳಿದುಬಂದಿದೆ.

ತಂಡದಲ್ಲಿ ನಾಲ್ಕರಿಂದ ಆರು ಮಂದಿ ಇದ್ದು, ಮನೆಗೆ ಆಗಮಿಸಿದ ಶಂಕಿತರು ಶಸಾಸ್ತ್ರ ಹಿಡಿದುಕೊಂಡಿದ್ದರು ಎನ್ನಲಾಗಿದೆ.

ಶಂಕಿತರು ಮನೆಗೆ ಆಗಮಿಸಿರುವ ಮಾಹಿತಿ ಇಲಾಖೆಗೆ ಲಭ್ಯವಾಗುತ್ತಲೇ ನಕ್ಸಲ್‌ ನಿಗ್ರಹ ಪಡೆ, ಪೊಲೀಸರು ಮಾಹಿತಿ ಕಲೆ ಹಾಕುವ ಕೆಲಸ ಮಾಡುತ್ತಿದ್ದು, ಎಎನ್‌ಎಫ್‌ ತಂಡ ಮನೆಗೆ ಭೇಟಿ ನೀಡಲಾದ ಆಸು-ಪಾಸು ಪರಿಸರದಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಶಂಕಿತರು ಅದೇ ಪರಿಸರಕ್ಕೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದತ್ತ ತೆರಳಿರುವ ಶಂಕೆ ಇದೆ.

More from the blog

ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲು ಗಡಿಪಾರು – ಸರಕಾರದ ಹಿಂದೂ ವಿರೋಧಿ ಧೋರಣೆ ನೀತಿಗೆ ಪ್ರಸಾದ್ ಕುಮಾರ್ ರೈ ಖಂಡನೆ

ಬಂಟ್ವಾಳ: ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೇಲು ಅವರ ಗಡಿಪಾರು ಅದೇಶ ರಾಜಕೀಯ ಪ್ರೇರಿತ ಷಡ್ಯಂತ್ರವಾಗಿದ್ದು,ಸರಕಾರದ ಹಿಂದೂ ವಿರೋಧಿ ಧೋರಣೆ ನೀತಿಯನ್ನು ವಿಶ್ವಹಿಂದೂ ಪರಿಷತ್ ಬಂಟ್ವಾಳ ‌ಪ್ರಖಂಡದ ಅಧ್ಯಕ್ಷ ನ್ಯಾಯವಾದಿ ಪ್ರಸಾದ್...

ಮದುವೆಗೆ ತೆರಳುತ್ತಿದ್ದ ಬಸ್ ಹಾಗೂ ಕಂಟೈನರ್ ವಾಹನದ ಮಧ್ಯೆ ಭೀಕರ ಅಪಘಾತ : ಹಲವರಿಗೆ ಗಾಯ

ನೆಲ್ಯಾಡಿ: ಖಾಸಗಿ ಬಸ್ ಹಾಗೂ ಕಂಟೈನರ್ ವಾಹನದ ನಡುವೆ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ನಡೆದಿದೆ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೊರಟ...

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ; ಪ್ರಕರಣ ದಾಖಲು

ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕ ಕುಟುಂಬದ ಬಾಲಕಿಗೆ ಅದೇ ಭಾಗದ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು,...

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...