Monday, April 8, 2024

ಬಿಳಿನೆಲೆಗೆ ಬಂದ ನಕ್ಸಲರಿಗೆ ಶೋಧ : 6 ಮೊಬೈಲ್‌, 1 ಲ್ಯಾಪ್‌ಟಾಪ್‌ ಚಾರ್ಜ್‌ ಮಾಡಿಸಿಕೊಂಡ ನಕ್ಸಲರು

ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿನ ಅರಣ್ಯದಂಚಿನ ಮನೆಗೆ ಗುರುವಾರ ರಾತ್ರಿ ಭೇಟಿ ನೀಡಿದ್ದ ಮುಸುಕುಧಾರಿ, ಶಸ್ತ್ರಧಾರಿ ನಕ್ಸಲರ ತಂಡದಲ್ಲಿ 6 ಮಂದಿ ಇದ್ದರು ಎನ್ನುವುದು ದೃಢಪಟ್ಟಿದೆ.

ಬಂದವರೆಲ್ಲರೂ ಒಂದೇ ರೀತಿಯ ವಸ್ತ್ರ ಧರಿಸಿದ್ದು, ಮುಖ ಮರೆಸಿಕೊಂಡಿದ್ದರು. ಶೂ ಧರಿಸಿದ್ದು, ದೊಡ್ಡ ಬ್ಯಾಗ್‌ ಹಾಕಿಕೊಂಡಿದ್ದರು. ಬ್ಯಾಗ್‌ನಲ್ಲಿ ಗನ್‌ ಮಾದರಿಯ ಉಪಕರಣ ಇರುವುದನ್ನು ಮನೆಯವರು ಗಮನಿಸಿದ್ದಾರೆ.

ಇಬ್ಬರು ಮನೆಯ ಒಳಗೆ ಪ್ರವೇಶಿಸಿದ್ದು, ವಿದ್ಯುತ್‌ ದೀಪಗಳನ್ನು, ಮನೆ ಯಜಮಾನರ ಮೊಬೈಲನ್ನು ಸ್ವಿಚ್‌ ಆಫ್ ಮಾಡಿಸಿ, ಟಿವಿಯ ಶಬ್ದವನ್ನು ಹೆಚ್ಚಿಸಿದ್ದರು. ಜತೆಗೆ ಬಂದಿದ್ದ ನಾಲ್ವರು ಮನೆಯ ಎದುರು ಹಾಗೂ ಹಿಂದೆ ನಿಂತುಕೊಂಡಿದ್ದರು. ಬಳಿಕ ಊಟ ಕೇಳಿ ತಯಾರಿಸಿ ಮನೆಯಲ್ಲಿದ್ದ ಕೋಳಿ ಪದಾರ್ಥದಲ್ಲಿ ಊಟ ಮಾಡಿದ್ದಾರೆ. ಮನೆಮಂದಿ ಟಿವಿಯಲ್ಲಿ ನೋಡುತ್ತಿದ್ದ ಧಾರಾವಾಹಿಯನ್ನೂ ವೀಕ್ಷಿಸಿ ಬಳಿಕ ಅಕ್ಕಿ ಸಹಿತ ಕೆಲವು ಸಾಮಗ್ರಿಗಳನ್ನು ಕೇಳಿ ಪಡೆದು ಅರಣ್ಯದತ್ತ ತೆರಳಿದ್ದರು. ಆರು ಮೊಬೈಲ್‌ ಫೋನ್‌ ಮತ್ತು ಒಂದು ಲ್ಯಾಪ್‌ಟಾಪ್‌ಗೆ ಚಾರ್ಜ್‌ ಮಾಡಿಸಿಕೊಂಡಿದ್ದರು. ಕನ್ನಡ ಹಾಗೂ ಇತರ ಭಾಷೆಗಳಲ್ಲಿ ಮಾತನಾಡಿದ್ದರು ಎಂದು ಮನೆಯವರು ಮಾಹಿತಿ ನೀಡಿದ್ದಾರೆ.

ನಕ್ಸಲರು ಮನೆಗೆ ಭೇಟಿ ನೀಡಿದ ವಿಚಾರ ತಿಳಿಯುತ್ತಲೇ ಪೊಲೀಸ್‌ ಅಧಿಕಾರಿಗಳು, ನಕ್ಸಲ್‌ ನಿಗ್ರಹ ಪಡೆಯವರು ಚೇರುವಿನ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಮನೆ ಸಮೀಪದ ಅರಣ್ಯ ಹಾಗೂ ಇತರ ಕಡೆಗಳಲ್ಲಿ ಎಎನ್‌ಎಫ್ ಶೋಧ ನಡೆಸುತ್ತಿದೆ.

 

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...