Sunday, April 14, 2024

ಮೊಸಳೆಯ ಹೊಟ್ಟೆಯಲ್ಲಿ 1 ಕೆ.ಜಿ ಪ್ಲಾಸ್ಟಿಕ್ ಪತ್ತೆ….! ತ್ಯಾಜ್ಯ ಜೀರ್ಣವಾಗದೆ ಮೊಸಳೆ ಸಾವು

ಸುಬ್ರಹ್ಮಣ್ಯ: ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಮೊಸಳೆ ಸಾವಿಗೆ ತ್ಯಾಜ್ಯ ಸೇವನೆ ಹಾಗೂ ಪ್ಲಾಸ್ಟಿಕ್‌ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.

ಕಡಬ-ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು ಸೇತುವೆ ಕೆಳಭಾಗದ ಕುಮಾರಧಾರಾ ಹೊಳೆಯ ಕೊಡಿಂಬಾಳ ಗ್ರಾಮದ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ಮೊಸಳೆಯ ಮೃತದೇಹ ಪತ್ತೆಯಾಗಿತ್ತು.

ಅರಣ್ಯ ಇಲಾಖೆಯ ಏನೆಕಲ್ಲು ನರ್ಸರಿ ಪ್ರದೇಶದಲ್ಲಿ ಮೊಸಳೆಯ ಮರಣೋತ್ತರ ಪರೀಕ್ಷೆಯನ್ನು ಕಡಬದ ಪಶುವೈದ್ಯಾಧಿಕಾರಿ ಡಾ| ಅಜಿತ್‌ ನಡೆಸಿದರು. ಮೊಸಳೆಯ ಹೊಟ್ಟೆಯಲ್ಲಿ ಪ್ಲಾಸ್ಟಿಕ್‌ ಕವರ್‌ನಲ್ಲಿ ತುಂಬಿದ್ದ ಕೋಳಿ ತ್ಯಾಜ್ಯ, ಮಕ್ಕಳಿಗೆ ಬಳಸುವ ಪ್ಯಾಡ್‌ ಮತ್ತಿತರ ತ್ಯಾಜ್ಯ ಕೆ.ಜಿ.ಗೂ ಅಧಿಕ ಪ್ರಮಾಣದಲ್ಲಿ ಪತ್ತೆಯಾಗಿದೆ. ಅದು ಜೀರ್ಣಗೊಳ್ಳದೆ ಅಸೌಖ್ಯದಿಂದ ಮೊಸಳೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಸುಮಾರು ಅಂದಾಜು 3-4 ವರ್ಷದ ಹೆಣ್ಣು ಮೊಸಳೆ ಇದಾಗಿದೆ.

ಮರಣೋತ್ತರ ಪರೀಕ್ಷೆ ಬಳಿಕ ಏನೆಕಲ್ಲಿನ ನರ್ಸರಿ ಪ್ರದೇಶದಲ್ಲಿ ಅಂತಿಮ ಪ್ರಕ್ರಿಯೆ ನಡೆಸಲಾಯಿತು. ಸುಬ್ರಹ್ಮಣ್ಯ ಅರಣ್ಯ ಉಪವಿಭಾಗ ಎಸಿಎಫ್‌ ಪ್ರವೀಣ್‌ ಕುಮಾರ್‌ ಶೆಟ್ಟಿ, ಪಂಜ ವಲಯ ಅರಣ್ಯಾಧಿಕಾರಿ ಗಿರೀಶ್‌, ಉಪ ವಲಯಾರಣ್ಯಾಧಿಕಾರಿಗಳಾದ ಸುಬ್ರಹ್ಮಣ್ಯ, ಅಜಿತ್‌ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬಂದಿ ಮಹಜರು ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.

More from the blog

ಬೋಳಾರ ಚೂರಿ ಇರಿತ ಪ್ರಕರಣ : ಆರೋಪಿ ಅರೆಸ್ಟ್

ಮಂಗಳೂರು: ಬೋಳಾರ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಆನಂದ್‌ ಸಪಲ್ಯ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಬೋಳಾರ್ ನಲ್ಲಿ ಕಟಿಂಗ್ ಶಾಪ್ ನಡೆಸುತ್ತಿರುವ ಎಡ್ವಿನ್ ವಿನಯ್ ಕುಮಾರ್ ಅವರಿಗೆ...

ಪ್ರಧಾನಿ ಮೋದಿ ರೋಡ್ ಶೋ ಸಮಯ ಬದಲಾವಣೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಸಮಯದಲ್ಲಿ ಬದಲಾವಣೆಯಾಗಿದ್ದು, ಏ.14ರಂದು ಸಂಜೆ 7.45ಕ್ಕೆ ರೋಡ್ ಶೋ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಚುನಾವಣಾ ಸಂಚಾಲಕ ವಿ. ಸುನಿಲ್ ಕುಮಾರ್...

ಕುಮಾರಧಾರಾ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆ

ಸುಬ್ರಹ್ಮಣ್ಯ: ಕುಮಾರಧಾರಾ ನದಿಯ ಪಂಜ – ಕಡಬ ಸಂಪರ್ಕ ರಸ್ತೆಯಲ್ಲಿ ಸಿಗುವ ಪುಳಿಕುಕ್ಕು ಸೇತುವೆಯ ಕೆಳಭಾಗದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದೆ. ಶುಕ್ರವಾರ ನದಿಯ ಒಂದು ಬದಿಯ ನೀರಿನಲ್ಲಿ ಅಂದಾಜು 1.5 – 2 ವರ್ಷದ ಮೊಸಳೆಯ...

ನಾಳೆ ಮಂಗಳೂರಿಗೆ ಪ್ರಧಾನಿ ಮೋದಿ : ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿರವರು ಏಪ್ರಿಲ್ 14 ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿಗಳ ಭದ್ರತೆಯ ದೃಷ್ಟಿಯಿಂದ ಹಾಗೂ ಸಂಚಾರ ಸುವ್ಯವಸ್ಥೆಗೆ...