Monday, April 15, 2024

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ.

ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಬಂಟ್ವಾಳ ‌ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು‌ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿನ ಮೇಲೆ ಪೆಟ್ಟು ಬಿದ್ದಿದ್ದು ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಘಟನೆ ನಡೆದ ಕೂಡಲೇ ಸಂಚಾರ ಪೋಲೀಸರು ಬೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದು, ಬಂಟ್ವಾಳ ನಗರ ಪೋಲೀಸ್ ಇನ್ಸ್ ಪೆಕ್ಟರ್ ಆನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

More from the blog

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...

ಹಿರಿಯ ಮತ್ತು ಅಂಗವಿಕಲ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುವ ಕಾರ್ಯ ಪ್ರಾರಂಭ

ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಜಾಸ್ತಿ ಅಂಗವೈಕಲ್ಯತೆ ಹೊಂದಿರುವ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುವ...