Friday, April 5, 2024

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​ 2 ರಿಂದ 16ರವರೆಗೆ ಬಿಸಿಗಾಳಿ ಬೀಸುವ ಸಾಧ್ಯತೆಗಳಿದ್ದು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹೆಚ್ಚಾಗಿ ಇರಲಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

 

ಇನ್ನು, ಏಪ್ರಿಲ್‌ನಲ್ಲಿ ಹೆಚ್ಚಾಗುತ್ತಿದ್ದ ಉಷ್ಣಾಂಶ ಮಾರ್ಚ್‌ನಲ್ಲೇ ಅಧಿಕವಾಗಿದೆ. ಸಾಮಾನ್ಯವಾಗಿ ಮಾರ್ಚ್ ಬಳಿಕ ಬಿಸಿಲಿನ ಬೇಗೆ ಹೆಚ್ಚಾಗುತ್ತಿತ್ತು. ಆದರೆ ಈ ಬಾರಿ ಫೆಬ್ರವರಿಯಿಂದ ಸುಡು ಬಿಸಿಲು ನೆತ್ತಿ ಸುಡುತ್ತಿದೆ.

More from the blog

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಬುಧವಾರ ನಾಮಪತ್ರ ಸಲ್ಲಿಸಿದರು. ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ...

ಯದುವೀರ್​​ ಒಡೆಯರ್​ ಬಳಿ ಇರೋ ಆಸ್ತಿ ಎಷ್ಟು ಗೊತ್ತಾ…?

ಮೈಸೂರು : ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಮೈಸೂರು ಒಡೆಯರ್‌ ಆಗಿರುವ ಯದುವೀರ್‌ ಈ ವೇಳೆ ಸುಮಾರು 5 ಕೋಟಿ ರೂ....