Friday, April 19, 2024

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ರಸ್ತೆ ಸಂಚಾರದಲ್ಲಿ ಬದಲಾವಣೆ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸಾರ್ವಜನಿಕರ ಹಿತ ಹಾಗೂ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಎ.19 ಮತ್ತು 20ರಂದು ಕಟೀಲು ಪರಿಸರದಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕವಾಗಿ ಮಾರ್ಪಡು ಮಾಡಲಾಗಿದೆ.

  • ಕಟೀಲು ಮುಖ್ಯರಸ್ತೆ (ರಥ ಬಿದಿ)ಯಲ್ಲಿ ಮಲ್ಲಿಗೆ ಅಂಗಡಿ ಕ್ರಾಸ್‌ನಿಂದ ದುರ್ಗಾ ಸಂಜೀವಿನಿ ಆಸ್ಪತ್ರೆ ಜಂಕ್ಷನ್ (ಕಲ್ಲಕುಮೇರು ಕ್ರಾಸ್)ವರೆಗೆ ವಾಹನ ಸಂಚಾರ ನಿಲುಗಡೆ ನಿಷೇಧಿಸಿದೆ.
  • ಮಂಗಳೂರಿನಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆ ಅಂಗಡಿ ಕ್ರಾಸ್ ಬಳಿ ಎಡಕ್ಕೆ ಚಲಿಸಿ, ಗಿಡಿಗೆರೆ ರಸ್ತೆ ಮೂಲಕ ಕಟೀಲು ಪಾರ್ಕಿಂಗ್ ಸ್ಥಳಗಳಿಗೆ ಚಲಿಸಬೇಕು.
  • ಕಟೀಲಿನಿಂದ ಮಂಗಳೂರಿಗೆ ಬರುವ ವಾಹನಗಳು ಕಟೀಲು ಪದವಿ ಪೂರ್ವ ಕಾಲೇಜು ಮೈದಾನದ ಪಕ್ಕದ ರಸ್ತೆಯ ಮೂಲಕ ಬ್ಯಾಂಕ್ ಆಫ್ ಬರೋಡಾ ಎದುರುಗಡೆ ರಸ್ತೆಯಲ್ಲಿ ಚಲಿಸಿ ಬಜಪೆ-ಮಂಗಳೂರು ಕಡೆಗೆ ಸಂಚರಿಸಬೇಕು.
  • ಸರ್ವಿಸ್ ಬಸ್, ಟೂರಿಸ್ಟ್ ಬಸ್, ಕಾರು ಮತ್ತಿತರ ವಾಹನಗಳಿಗೆ ಬಸ್ ಸ್ಟ್ಯಾಂಡ್ ಹಿಂದುಗಡೆ ಇರುವ ಸಿತ್ಲಾ ಮೈದಾನ ಹಾಗೂ ಕಟೀಲು ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ಹಾಗೂ ಅಪರ ದಂಡಾಧಿ ಕಾರಿಗಳು ಆಗಿರುವ ಅನುಪಮ್ ಅಗ್ರವಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ

More from the blog

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ವೋಟ್ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ಹಿರಿಯ ಜೀವ

ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ ಮೃತಪಟ್ಟವರು. ಯಶೋಧಾ ಅವರು ನಿವೃತ್ತ ಗ್ರಾಮ...

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...