ಮಂಗಳೂರು: ಕೇರಳದ ಆಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಕ್ಕಿ ಜ್ವರ ಇರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲಿ ವಾಹನಗಳ ತಪಾಸಣೆ ಆರಂಭಗೊಂಡಿದೆ.
ಗಡಿ ಭಾಗವಾದ ತಲಪಾಡಿ, ಜಾಲ್ಸೂರು, ಸಾರಡ್ಕಗಳಲ್ಲಿ ವಿಶೇಷ ಚೆಕ್‌ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಕೋಳಿ ಲೋಡ್‌ಗಳನ್ನು ಹೊತ್ತ ಕೆಲ ವಾಹನಗಳು ಜಿಲ್ಲೆಯಿಂದ ಕೇರಳಕ್ಕೆ ಹೋಗುತ್ತವೆ. ಮರಳಿ ಬರುವ ವೇಳೆ ಆ ವಾಹನಗಳಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ