Thursday, April 25, 2024

ಅಡಿಕೆ ಹಾಗೂ ಹಿಂಗಾರ ಕಳ್ಳತನ : ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಕೆಲಸಗಾರರು

ಕಿನ್ನಿಗೋಳಿ: ಅಡಿಕೆ ಹಾಗೂ ಹಿಂಗಾರ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ತೋಟದ ಕೆಲಸಗಾರರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಅಡಿಕೆ ಕಳ್ಳನನ್ನು ಅಂಗಾರ ಗುಡ್ಡೆ ನಿವಾಸಿ ವಿಜಯ ಎಂದು ಗುರುತಿಸಲಾಗಿದೆ.

ಇಲ್ಲಿನ ಕೆಂಚನಕೆರೆಯ ಉದ್ಯಮಿ ಶ್ರೀಕಾಂತ್‌ ಶೆಟ್ಟಿ ಅವರ ತೋಟದಲ್ಲಿ ಬುಧವಾರ ಮಧ್ಯಾಹ್ನ ತೋಟದಿಂದ ಹಿಂಗಾರ ಕಳವು ಮಾಡುತ್ತಿದ್ದ ವೇಳೆ ತೋಟದ ಕಾರ್ಮಿಕರಲ್ಲಿ ಓಬ್ಬರಾದ ನಾರಾಯಣ ಎಂಬವರು ಆರೋಪಿ ವಿಜಯನನ್ನು ಹಿಡಿಯಲೆತ್ನಿಸಿದಾಗ ಚೂರಿಯಿಂದ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ನಾರಾಯಣ ಕಿರುಚಿದ್ದರಿಂದ ಉಳಿದ ಕೆಲಸದವರು ಬಂದು ಆರೋಪಿಯನ್ನು ಹಿಡಿದು ಮುಲ್ಕಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಸುಮಾರು ಎರಡು ಕ್ವಿಂಟಾಲ್‌ ಅಡಿಕೆ ಹಾಗೂ 500ಕ್ಕೂ ಹೆಚ್ಚು ಹಿಂಗಾರ ಕಳವು ಮಾಡಲಾಗಿದೆ ಎಂದು ಶ್ರೀಕಾಂತ್‌ ಶೆಟ್ಟಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

More from the blog

ಅಡಿಕೆ ದರ ಏರಿಕೆ : ಚುನಾವಣೆ ಬಳಿಕ ಮತ್ತಷ್ಟು ಏರಿಕೆ..?

ಪುತ್ತೂರು:ಲೋಕಸಭಾ ಚುನಾವಣೆ ಮುಗಿದ ಬಳಿಕ ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ ಧಾರಣೆ ಏರಿಕೆ ಕಾಣುವ ಸಾಧ್ಯತೆಯನ್ನು ಮಾರುಕಟ್ಟೆ ಮೂಲಗಳು ವ್ಯಕ್ತಪಡಿಸಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಚುನಾವಣೆ ದಿನಾಂಕ ಘೋಷಣೆಯ ಮೊದಲು ಅಂದರೆ ಫೆಬ್ರವರಿಯಲ್ಲಿ...

ತಗ್ಗಿದ ಮಳೆ, ರಾಜ್ಯದ 10 ಜಿಲ್ಲೆಗಳಿಗೆ ಮತ್ತೆ ಬಿಸಿಗಾಳಿ ಎಚ್ಚರಿಕೆ

ಬೆಂಗಳೂರು: ಕಳೆದೊಂದು ವಾರದಿಂದ ರಾಜ್ಯದ ವಿವಿಧೆಡೆ ಭಾರೀ ಮಳೆಯಾದ ಬೆನ್ನಲ್ಲೇ ಇದೀಗ ತಾಪಮಾನ ಮತ್ತೆ ಏರಿಕೆಯಾಗಿದ್ದು ರಾಜ್ಯದ 10 ಜಿಲ್ಲೆಗಳಲ್ಲಿ ಬಿಸಿಗಾಳಿಯ ಮುನ್ನೆಚ್ಚರಿಕೆ ನೀಡಲಾಗಿದೆ. ಎ. 24ರಿಂದ 27ರ ವರೆಗೆ ರಾಯಚೂರು, ವಿಜಯಪುರ, ಯಾದಗಿರಿ,...

ನೌಕಾಪಡೆಯ 2 ಹೆಲಿಕಾಪ್ಟರ್ ಪತನ; ಛಿದ್ರ, ಛಿದ್ರವಾದ ನೌಕಾಪಡೆಯ 10 ಮಂದಿ

ಕೌಲಾಲಂಪುರ: ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್‌ಗಳು ಡಿಕ್ಕಿ ಹೊಡೆದು 10 ಮಂದಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮಲೇಷ್ಯಾದ ಲುಮುಟ್ ಪಟ್ಟಣದ ನೌಕಾನೆಲೆಯಲ್ಲಿ ಹೆಲಿಕಾಪ್ಟರ್​ಗಳು ಪರೇಡ್‌ ನಡೆಸುತ್ತಿರುವಾಗ ಈ ಅವಘಡ ಸಂಭವಿಸಿದೆ. ಅತ್ಯಂತ ಸಮೀಪದಲ್ಲಿ ಹಾರಾಟ...

ಬಿಜೆಪಿ ಪಕ್ಷದಿಂದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಉಚ್ಛಾಟನೆ

ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಬಿಜೆಪಿ ಶಿಸ್ತು ಸಮಿತಿ ಸೋಮವಾರ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಅವರು ಸೋಮವಾರ ಈಶ್ವರಪ್ಪ ಅವರನ್ನು ಆರು ವರ್ಷಗಳ ಕಾಲ...