Friday, April 5, 2024

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ.

ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಮಾರ್ಚ್ 30 ರಂದು ಕಟಪಾಡಿ ಖಾಸಗಿ ಕಾಲೇಜು ಅವರಣದಲ್ಲಿ ಶ್ರೀನಿವಾಸ ಪೂಜಾರಿ ಪ್ರಚಾರ ಭಾಷಣ ಮಾಡಿದ್ದರು. ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೆ ರಾಜಕೀಯ ಭಾಷಣ ಮಾಡಿದ ಹಿನ್ನಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಕೋರ್ಟ್‌ಗೆ ಖಾಸಗಿ ದೂರು ದಾಖಲಿಸಲಾಗಿತ್ತು. ಈ ದೂರಿನ ಹಿನ್ನೆಲೆಯಲ್ಲಿ ಕೋರ್ಟ್‌ ಸಮನ್ಸ್‌ ಜಾರಿ ಮಾಡಿ ಮೇ 27ಕ್ಕೆ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಕೋರ್ಟ್ ಆದೇಶ ಹೊರಡಿಸಿದೆ.

More from the blog

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಬುಧವಾರ ನಾಮಪತ್ರ ಸಲ್ಲಿಸಿದರು. ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...