Friday, April 5, 2024

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘದ ಅಧ್ಯಕ್ಷ ಮುರುವ ನಡುಮನೆ ಮಹಾಬಲ ಭಟ್ ಘೋಷಿಸಿದರು.

ಅವರು ವಿಟ್ಲದಲ್ಲಿ ಪತ್ರಿಕಾಗೋಷ್ಠಿ ಕರೆದು ಮಾತನಾಡಿ, ವರ್ಷಕ್ಕೆ ಎರಡು ಮೂರು ಬಾರಿ ಚುನಾವಣೆ ಬರುತ್ತದೆ. ಆಗ ಪರವಾನಿಗೆ ಹೊಂದಿರುವ ಕೋವಿಯನ್ನು ಪೊಲೀಸ್‌ ಠಾಣೆಯಲ್ಲಿ ಠೇವಣಿ ಇಡಬೇಕಾಗುತ್ತದೆ. ರೈತರು ಕೃಷಿ ಉತ್ಪನ್ನಗಳನ್ನು ನಾಶ ಮಾಡುವ ಪ್ರಾಣಿಗಳಿಂದ ಮತ್ತು ಕಳ್ಳರಿಂದ ರಕ್ಷಣೆಗೆ ಈ ಪರವಾನಿಗೆ ಪಡೆಯುತ್ತೇವೆ. ಆದರೆ ನಮಗೆ ಕೋವಿ ಉಪಯೋಗಕ್ಕಿಲ್ಲದಂತೆ ಮಾಡುವ ಸರಕಾರದ ಧೋರಣೆ ಸರಿಯಲ್ಲ. ಇದು ಸರಕಾರ ರೈತರನ್ನು ಕೀಳು ದರ್ಜೆಯ ಪ್ರಜೆಗಳಂತೆ ನೋಡಿಕೊಳ್ಳುವ ರೀತಿಯಾಗಿದೆ. ಎಪ್ರಿಲ್ 1ರ ಅನಂತರ ಕೋವಿ ಇಡಬೇಕೆಂದು ಜಿಲ್ಲಾಡಳಿತ ತಿಳಿಸಿದ್ದರೂ ಪೊಲೀಸ್ ಠಾಣೆಯಲ್ಲಿ ಮಾ.20 ರೊಳಗ ತಂದಿಡ ಬೇಕೆನ್ನುತ್ತಾರೆ. ಕೋವಿ ಠಾಣೆಯಲ್ಲಿದ್ದಾಗ ಆದ ಕಷ್ಟ ನಷ್ಟಗಳಿಗೆ ಜಿಲ್ಲಾಡಳಿತ ಪೊಲೀಸ್ ಇಲಾಖೆ ಹೊಣೆ ವಹಿಸಿಕೊಂಡು ನಷ್ಟ ಭರಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಚುನಾವಣೆಯಿಂದ ರೈತರಿಗೆ ಸಂಕಷ್ಟ ಬಂದಿದೆ. ರೈತರ, ಕೃಷಿಕರ ಜೀವನ ದುಸ್ತರವಾಗಿದೆ. ಆದುದರಿಂದ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ಎನ್.ಕೆ.ಇದಿನಬ್ಬ ಸಜಿಪಮುನ್ನೂರು, ಸದಸ್ಯರಾದ ಪಿ.ಶಿವಚಂದ್ರ ಪಡುವನ್ನೂರು, ವಿನೋದ್ ಶೆಟ್ಟಿ ಪಡುವನ್ನೂರು, ಜಯಪ್ರಕಾಶ ರೈ ನೂಜಿಬಲು ಉಪಸ್ಥಿತರಿದ್ದರು.

More from the blog

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...