Saturday, April 13, 2024

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ ತ್ರಿಬಲ್ ರೈಡ್ ಮಾಡುತ್ತಿದ್ದ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ.

ರಮೀಝ್, ಸಮೀಮ್ ಮತ್ತು ಸೋಯಿಕ್ ಗಾಯಗೊಂಡ ಯುವಕರು .

ಪುದು ಗ್ರಾಮದ ಕಡೆಗೋಳಿ ಎಂಬಲ್ಲಿ ಪ್ರಯಾಣಿಕರನ್ನು ಇಳಿಸಿ ಹೊರಡುವಾಗ ಹಿಂಬದಿಯಿಂದ ಬಂದ ಸ್ಕೂಟರ್ ಡಿಕ್ಕಿಯಾಗಿದೆ.

‌ ‌ ಗಾಯಗೊಂಡ ‌ಮೂವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೆಲ್ಕಾರ್ ಟ್ರಾಫಿಕ್ ಪೋಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...

ಜಮೀನಿನ ವಿಚಾರದಲ್ಲಿ ತಕರಾರು ನಡೆಸಿ ಹಲ್ಲೆ ಪ್ರಕರಣ : ಶಿಕ್ಷೆ ಪ್ರಕಟ

ಬಂಟ್ವಾಳ: ಜಮೀನಿನ ವಿಚಾರದಲ್ಲಿ ತಕರಾರು ಉಂಟಾಗಿ ಹಲ್ಲೆ ನಡೆಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಶಿಕ್ಷೆ ಪ್ರಕಟಗೊಳಿಸಿದ ಬಗ್ಗೆ ವರದಿಯಾಗಿದೆ. ದೇವಸ್ಯ ಪಡೂರು ಗ್ರಾಮ,ಕುಟ್ಟಿಕಳ ,ಅಲ್ಲಿಪಾದೆ ಎಂಬಲ್ಲಿ ನೀಲಯ್ಯ ಮೂಲ್ಯ ಹಾಗೂ ಶ್ರೀನಿವಾಸ್ ಪೂಜಾರಿ ರವರಿಗೆ...

ಲೋಕಸಭಾ ಚುನಾವಣೆ : ಮತಯಂತ್ರಗಳ ಕಮಿಷನಿಂಗ್‌ ಕಾರ್ಯ…. ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಬಂಟ್ವಾಳ :ಮೊಡಂಕಾಪಿನಲ್ಲಿರುವ ಇನ್ಫೆಂಟ್‌ ಜೀಸಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ದಿನ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205 ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಳಸಲಾಗುವ ಮತಯಂತ್ರಗಳ ಕಮಿಷನಿಂಗ್‌ ಕಾರ್ಯವು ನಡೆಯಿತು. ಈ ಸಂದರ್ಭದಲ್ಲಿ...

ಮಯ್ಯರಬೈಲು: ಏ.14 ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯುಗಾದಿ ಉತ್ಸವ ಕಾರ್ಯಕ್ರಮ

ಮಾತೃಭೂಮಿ ಯುವ ಬಳಗ ಹಾಗೂ ಮಾತೃಭೂಮಿ ಮಹಿಳಾ ಮಂಡಳಿ ಮಯ್ಯರಬೈಲು ಇವರ ಜಂಟಿ ಅಶ್ರಯದಲ್ಲಿ ಚತುರ್ಥ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯುಗಾದಿ ಉತ್ಸವ ಕಾರ್ಯಕ್ರಮ ಏ.14 ರಂದು ಮಯ್ಯರಬೈಲಿನಲ್ಲಿ...