Friday, April 5, 2024

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಮುಖಂಡ ಗಿರೀಶ್ ಮಟ್ಟನ್ನನವರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ನಡೆದು 11 ವರ್ಷ ಕಳೆದರೂ ಯಾವುದೇ ರಾಜಕೀಯ ಪಕ್ಷಗಳು ಸ್ಪಂದನೆ‌ ನೀಡಿಲ್ಲ. ಆದ್ದರಿಂದ ಈ ಬಾರಿ ನೋಟಕ್ಕೆ ಮತಚಲಾಯಿಸಿ ಗಮನ ಸೆಳೆಯಲು ಉದ್ದೇಶಿಸಲಾಗಿದೆ. ದ‌.ಕ. ಹಾಗೂ ಉಡುಪಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರವಾರು ಅಭಿಯಾನ ಹಮ್ಮಿಕೊಳ್ಳುತ್ತಿದ್ದು, ಸುಳ್ಯದಲ್ಲಿ ಎ. 24ರಂದು ನೋಟ ಜನಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದರು.

More from the blog

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...

ವ್ಯಕ್ತಿಯ ಮನೆಗೆ ನುಗ್ಗಿ ಹಲ್ಲೆ : ಪ್ರಕರಣ ದಾಖಲು

ಬಂಟ್ವಾಳ: ಸಾಲ ಪಡೆದುಕೊಂಡ ವ್ಯಕ್ತಿಯೋರ್ವ ಸಾಲ ಮರುಪಾವತಿ ಮಾಡದೆ, ಕೇಳಿದ್ದಕ್ಕೆ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಘಟನೆ ಸಿದ್ದಕಟ್ಟೆಯ ಸಂಗಬೆಟ್ಟು ಎಂಬಲ್ಲಿ ನಡೆದಿದ್ದು,ಬಂಟ್ವಾಳ ಗ್ರಾಮಾಂತರ ‌ಪೋಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ. ಸಂಗಬೆಟ್ಟು ಗ್ರಾಮದ ಕೊಮ್ಮಡ...