Friday, April 5, 2024

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ಸಾಗಿಬಂತು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ ಸಮಾವೇಶ ನಡೆಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ ಮುಖಂಡರಾದ ಸಿ.ಟಿ.ರವಿ, ವಿ.ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಅರುಣ್ ಕುಮಾರ್ ಪುತ್ತಿಲ, ದ.ಕ ಹಾಗೂ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಸಹಿತ ಪ್ರಮುಖರು ಭಾಗವಹಿಸಿದರು

More from the blog

ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಜಾತ್ರೆಯಲ್ಲಿ ದೇವರ ರಥ ಹೋಗುವ...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್ ವರೆಗೆ...

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿ

ಮಂಗಳೂರು: ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ  ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ನಡೆದಿದೆ. ಕೂಡಲೇ ಅವರನ್ನು ನಗರ್ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ...

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...