Wednesday, April 17, 2024

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಅಧ್ಯಕ್ಷ ಸ್ಥಾನದ ಚುಕ್ಕಾಣಿ ಹಿಡಿದ ಬಳಿಕ ಜೆಡಿಎಸ್ ಪಕ್ಷ ಸಂಪೂರ್ಣವಾಗಿ ವರ್ಚಸ್ಸು ಕಳೆದುಕೊಂಡು ಹೀನಾಯ ಸ್ಥಿತಿಗೆ ತಲುಪಿದೆ.

ಬಹುಶಃ ಈ ಹಿಂದೆ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದ ಎಂ.ಬಿ ಸದಾಶಿವ ,ಮಹಮ್ಮದ್ ಕುಂಞ ಯಾಗಿರಲಿ ಅವರಿದ್ದಂತಹ ಸಂದರ್ಭದಲ್ಲಿ ಇಷ್ಟು ಕೆಳಮಟ್ಟಕ್ಕೆ ಇಳಿದಿರಲಿಲ್ಲ.

ಆದರೆ ನಂತರದ ದಿನಗಳಲ್ಲಿ ಜಾಕೆ ಮಾದವ ಗೌಡರು ಅಧ್ಯಕ್ಷ ಸ್ಥಾನವನ್ನು ‌ಅಲಂಕರಿಸಿದ ಬಳಿಕ ಪಕ್ಷದಲ್ಲಿ ಯಾವುದೇ ಕಾರ್ಯ ಚಟುವಟಿಕೆಗಳಿಲ್ಲದೆ‌ ಸಂಪೂರ್ಣ ಸ್ಲೀಪಿಂಗ್ ಮೋಡ್ ಗೆ ತಲುಪಿದೆ ಎಂದು ಬೇಸರ ವ್ಯಕ್ತಪಡಿಸಿದರು. ಪಕ್ಷದ ಕಾರ್ಯಕರ್ತರನ್ನು ಸಂಪರ್ಕ ಮಾಡುವುದಾಗಲಿ, ಅವರ ಜೊತೆ ಸಂಬಂಧವನ್ನು ಉಳಿದುಕೊಳ್ಳಲು ವಿಫಲಾಗಿದ್ದಾರೆ. ಜೊತೆಗೆ ಅಧ್ಯಕ್ಷರ ಸ್ವ ಕ್ಷೇತ್ರವಾಗಿರುವ ಸುಳ್ಯದಲ್ಲಿ ಸುಮಾರು 40 ಜನ ಕಾರ್ಯಕರ್ತರು ಜೆ.ಡಿ.ಎಸ್.ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಪಕ್ಷವನ್ನು ಉಳಿಸಿ, ಕಾರ್ಯಕರ್ತರನ್ನು ಉಳಿಸಿ ಪಕ್ಷವನ್ನು ಬೆಳೆಸುವಲ್ಲಿ ವಿಫಲರಾಗಿರುವ ಮಾದವ ಗೌಡರು ನೈತಿಕ ಹೊಣೆ ರಾಜೀನಾಮೆ ನೀಡುವಂತೆ ಒತ್ತಾಯ ಮಾಡಿದ್ದಾರೆ.

More from the blog

ವೋಟ್ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ಹಿರಿಯ ಜೀವ

ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ ಮೃತಪಟ್ಟವರು. ಯಶೋಧಾ ಅವರು ನಿವೃತ್ತ ಗ್ರಾಮ...

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...

ಬಂಟ್ವಾಳದ ಹಿಂದೂ ಯುವ ಸೇನಾ ಮುಖಂಡನಿಗೆ ಚೂರಿ ಇರಿದ ದುಷ್ಕರ್ಮಿಯನ್ನು ಶೀಘ್ರ ಬಂದಿಸಿ, ಕಠಿನ ಶಿಕ್ಷೆ ವಿಧಿಸುವಂತೆ ಹಿಂದೂ ಯುವ ಸೇನೆ ಆಗ್ರಹ

ಬಂಟ್ವಾಳ: ಹಿಂದೂ ಯುವ ಸೇನೆ ಬಂಟ್ವಾಳ ತಾಲೂಕು ಘಟಕದ ಮಾಜಿ ಅಧ್ಯಕ್ಷ ಪುಷ್ಪರಾಜ್ ರವರು ದುಷ್ಕರ್ಮಿಯಿಂದ ಚೂರಿ ಇರಿತಕ್ಕೊಳಗಾಗಿರುವುದನ್ನು ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿ, ಬಂಟ್ವಾಳ ತಾಲೂಕು ಘಟಕ ಖಂಡಿಸುತ್ತದೆ. ಅಮಾಯಕ ಪುಷ್ಪರಾಜ್...