Monday, April 8, 2024

ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಗೊಂಡಿದ್ದು, ಅದರಂತೆ, ಏಪ್ರಿಲ್ 14 ರಂದು ದ.ಕ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ ನಡೆಯಲಿದೆ..

ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ನರೇಂದ್ರ ಮೋದಿ, ಮೊದಲಿಗೆ ಮಧ್ಯಾಹ್ನ 3 ಗಂಟೆಗೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಪರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳುವುದು ಎಂದು ಈ ಹಿಂದೆ ನಿಗದಿಯಾಗಿತ್ತು. ಸಮಾವೇಶ ಮುಗಿದ ನಂತರ ಬೆಂಗಳೂರಿಗೆ ಆಗಮಿಸಿ, ಸಂಜೆ ಶೋಭಾ ಕರಂದ್ಲಾಜೆ ಕ್ಷೇತ್ರವಾದ ಬೆಂಗಳೂರು ಉತ್ತರದಲ್ಲಿ ರೋಡ್ ಶೋ ನಡೆಸುವುದೆಂದು ನಿರ್ಧರಿಸಲಾಗಿತ್ತು. ಆದರೆ, ಇದೀಗ ಚಿಕ್ಕಬಳ್ಳಾಪುರದ ಬದಲು ಮಂಗಳೂರಿನಲ್ಲಿ ಕಾರ್ಯಕ್ರಮ ನಿಗದಿಯಾಗಿದೆ. ನಂತರ ಬೆಂಗಳೂರಿನಲ್ಲಿ ರೋಡ್​ ಶೋ ನಿಗದಿಯಂತೆಯೇ ನಡೆಯಲಿದೆ. ಸಂಜೆ 6ರಿಂದ 7 ಗಂಟೆಯವರೆಗೆ ಹೆಬ್ಬಾಳ-ಬ್ಯಾಟರಾಯನಪುರದಲ್ಲಿ ರೋಡ್ ಶೋ ನಡೆಯಲಿದೆ.

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ...

ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಜಾತ್ರೆಯಲ್ಲಿ ದೇವರ ರಥ ಹೋಗುವ...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್ ವರೆಗೆ...