Sunday, April 14, 2024

ಮಂಗಳೂರು: ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಮೈಸೂರಿನಲ್ಲಿ ಅದ್ದೂರಿ ಬಿಜೆಪಿ ಮತ್ತು ಜೆಡಿಎಸ್ ಮಿತ್ರಪಕ್ಷಗಳ ಸಮಾವೇಶದಲ್ಲಿ ಭಾಗಿಯಾಗಿ ಬಂದ ಪ್ರಧಾನಿ ಮೋದಿ ಅವರು ನಾರಾಯಣಗುರು ವೃತ್ತದಿಂದ ಅಲಂಕೃತ ವಿಶೇಷ ವಾಹನವನ್ನೇರಿ ರೋಡ್ ಶೋ ಆರಂಭಿಸಿದರು. ವಾಹನದಲ್ಲಿ ಕರಾವಳಿಯ ಬಿಜೆಪಿ ಅಭ್ಯರ್ಥಿಗಳಾದ ಕ್ಯಾ.ಬ್ರಿಜೇಶ್ ಚೌಟ ಮತ್ತು ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದಾರೆ.

ಕೈಯಲ್ಲಿ ಹೊಳೆಯುವ ಕಮಲದ ಚಿಹ್ನೆ ಹಿಡಿದುಕೊಂಡಿದ್ದ ಮೋದಿ ಅವರು ಹಸನ್ಮುಖರಾಗಿ ಎಲ್ಲರತ್ತ ಕೈ ಬೀಸುತ್ತಾ ಸಾಗಿದರು. ರೋಡ್ ಶೋ ಉದ್ದಕ್ಕೂ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಪ್ರಧಾನಿ ಮೋದಿ ಅವರ ಮೇಲೆ ನಿರಂತರ ಪುಷ್ಪ ವೃಷ್ಟಿ ಗೈದರು.

ರೋಡ್ ಶೋ ವೇಳೆ ಕರಾವಳಿಯ ವಿಶೇಷ ವಾದ್ಯಗಳು, ಯಕ್ಷಗಾನ, ಹುಲಿ ವೇಷ, ಚಂಡೆ ಮೇಳಗಳು ವೈಭವ ಹೆಚ್ಚಿಸಿದವು. ಮಕ್ಕಳು, ವೃದ್ದರು ಮತ್ತು ಮಹಿಳೆಯರು ಭಾರಿ ಸಂಖ್ಯೆಯಲ್ಲಿ ರೋಡ್ ಶೋ ಕಣ್ತುಂಬಿಸಿಕೊಂಡರು.

 

 

More from the blog

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಪ್ರಧಾನಿ ಮೋದಿ ರೋಡ್ ಶೋಗೆ ಸಿದ್ಧತೆ : ರಸ್ತೆಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

ಮಂಗಳೂರು: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ ಶೋ ಇರುವ ಹಿನ್ನೆಲೆಯಲ್ಲಿ ಭಾರೀ ಪೊಲೀಸ್‌ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಶನಿವಾರ ಸಂಜೆಯಿಂದಲೇ ಪೊಲೀಸರು ಕಾರ್ಯ ನಿರತರಾಗಿದ್ದು, ಹೊಸದಿಲ್ಲಿಯಿಂದ ಆಗಮಿಸಿರುವ ಎಸ್‌ಪಿಜಿ ಅಧಿಕಾರಿಗಳು ರೋಡ್‌ ಶೋ...

ಮೊಸಳೆಯ ಹೊಟ್ಟೆಯಲ್ಲಿ 1 ಕೆ.ಜಿ ಪ್ಲಾಸ್ಟಿಕ್ ಪತ್ತೆ….! ತ್ಯಾಜ್ಯ ಜೀರ್ಣವಾಗದೆ ಮೊಸಳೆ ಸಾವು

ಸುಬ್ರಹ್ಮಣ್ಯ: ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಮೊಸಳೆ ಸಾವಿಗೆ ತ್ಯಾಜ್ಯ ಸೇವನೆ ಹಾಗೂ ಪ್ಲಾಸ್ಟಿಕ್‌ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಕಡಬ-ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು...

ಬೋಳಾರ ಚೂರಿ ಇರಿತ ಪ್ರಕರಣ : ಆರೋಪಿ ಅರೆಸ್ಟ್

ಮಂಗಳೂರು: ಬೋಳಾರ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಆನಂದ್‌ ಸಪಲ್ಯ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಬೋಳಾರ್ ನಲ್ಲಿ ಕಟಿಂಗ್ ಶಾಪ್ ನಡೆಸುತ್ತಿರುವ ಎಡ್ವಿನ್ ವಿನಯ್ ಕುಮಾರ್ ಅವರಿಗೆ...