Sunday, April 28, 2024

ಮದುವೆ ಆಮಂತ್ರಣದಲ್ಲಿ ಪ್ರಧಾನಿ ಮೋದಿಯನ್ನು ಗೆಲ್ಲಿಸುವಂತೆ ಉಲ್ಲೇಖ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ ನರೇಂದ್ರ ಮೋದಿಯನ್ನು ಪ್ರಧಾನಿ ಮಾಡುವುದೇ ವಧೂವರರಿಗೆ ನೀಡುವ ಉಡುಗೊರೆ’ ಎಂದು ದಾಖಲಿಸಿರುವುದಕ್ಕೆ ವರನ ವಿರುದ್ದ ನೀತಿ ಸಂಹಿತೆ ಜಾರಿ ನಿಗಾ ತಂಡದ ಅಧಿಕಾರಿಗಳು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಕಡಬ ತಾಲೂಕು ಆಲಂತಾಯ ಗ್ರಾಮದ ಶಿವಾರು ಶಿವಪ್ಪ ಗೌಡ ಅವರ ಮಗ ಶಿವಪ್ರಸಾದ್‌ ಯಾನೆ ರವಿ ಅವರ ವಿವಾಹವು ಕಡಬ ತಾಲೂಕು ಹಳೆನೇರಂಕಿ ಗ್ರಾಮದ ಕೊಳಂಬೆ ಬಾಬು ಗೌಡರ ಮಗಳು ಪ್ರಮೀಳಾ ಕೆ ಅವರೊಂದಿಗೆ ಎ. 18ರಂದು ಗೋಳಿತೊಟ್ಟು ಸಿದ್ದಿವಿನಾಯಕ ಕಲಾ ಮಂದಿರದಲ್ಲಿ ಜರಗಿತ್ತು. ವಿವಾಹದ ಅಂಗವಾಗಿ ಸಿದ್ದಪಡಿಸಲಾದ ಆಮಂತ್ರಣ ಪತ್ರವನ್ನು ಮಾರ್ಚ್‌ 1ರಂದು ಮುದ್ರಿಸಲಾಗಿದ್ದು, ಈ ಆಮಂತ್ರಣ ಪತ್ರದಲ್ಲಿ “ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡುವುದೇ ನೀವು ನಮಗೆ ನೀಡುವ ಉಡುಗೊರೆ’ ಎಂದು ಶಿವಪ್ರಸಾದ್‌ ಅವರು ಉಲ್ಲೇಖಿಸಿದ್ದರು.

ಈ ಬಗ್ಗೆ ಮಾಹಿತಿ ಪಡೆದುಕೊಂಡ ಚುನಾವಣ ನೀತಿ ಸಂಹಿತೆ ಜಾರಿ ನಿಗಾ ತಂಡದ ಅಧಿಕಾರಿಗಳು ಎಪ್ರಿಲ್‌ 14ರಂದು ವರನ ಮನೆಗೆ ಭೇಟಿ ನೀಡಿ ವಿಚಾರಿಸಿದಾಗ, ತಾನು ಮಾರ್ಚ್‌ 1ರಂದೇ 800 ಆಮಂತ್ರಣ ಪತ್ರವನ್ನು ಮುದ್ರಿಸಿದ್ದು, ಅದರಲ್ಲಿ ಹತ್ತು ಆಮಂತ್ರಣ ಪತ್ರ ಹೊರತುಪಡಿಸಿ ಎಲ್ಲವನ್ನೂ ಹಂಚಲಾಗಿದೆ. ಚುನಾವಣ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಆಮಂತ್ರಣ ಪತ್ರವನ್ನು ಮುದ್ರಿಸಿ, ವಿತರಿಸಲಾಗಿದ್ದು ಇದು ಚುನಾವಣ ನೀತಿ ಸಂಹಿತೆಯ ಉಲ್ಲಂಘನೆಯಾಗಿರುವುದಿಲ್ಲ. ಪ್ರಧಾನಿ ಮೋದಿಯ ಮೇಲಿನ ಪ್ರೀತಿ ಹಾಗೂ ರಾಷ್ಟ್ರದ ಮೇಲಿನ ಕಾಳಜಿಯಿಂದ ಇದನ್ನು ಉಲ್ಲೇಖೀಸಲಾಗಿದೆಯೇ ವಿನಃ ಕಾನೂನನ್ನು ಉಲ್ಲಂಘಿಸುವ ಬೇರಾವುದೇ ಉದ್ದೇಶವನ್ನು ಹೊಂದಿರುವುದಿಲ್ಲ ಎಂದು ಲಿಖಿತವಾಗಿ ಮನವಿ ಸಲ್ಲಿಸಿದ್ದರು.

ಬಳಿಕ ಎ.18ರಂದು ವಿವಾಹ ಸಾಂಗವಾಗಿ ನೆರವೇರಿದ್ದು, ಎ.26ರ ಚುನಾವಣೆಯೂ ಮುಗಿದ ಬಳಿಕ ಅಧಿಕಾರಿಗಳು ಪೊಲೀಸ್‌ ಇಲಾಖೆಗೆ ದೂರು ಸಲ್ಲಿಸಿದ್ದು, ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶನಿವಾರದಂದು ಆಮಂತ್ರಣ ಪತ್ರಿಕೆ ಮುದ್ರಣ ಮಾಡಿದ ಸಂಸ್ಥೆಯ ಮಾಲಕರನ್ನು ಕರೆಯಿಸಿ ಮಹಜರು ಪ್ರಕ್ರಿಯೆಯನ್ನು ನಡೆಸಲಾಯಿತು.

 

 

More from the blog

ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಸುರತ್ಕಲ್‌: ಸುರತ್ಕಲ್‌ ಸಮೀಪದ ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆ ಖ್ಯಾತ ಚಲನ ಚಿತ್ರನಟಿ ತುಳುನಾಡಿನ ವರಾದ ಶಿಲ್ಪಾ ಶೆಟ್ಟಿ ಭೇಟಿ ನೀಡಿ ಬ್ರಹ್ಮಕುಂಭಾಭಿಷೇಕದ ಅಂಗವಾಗಿ ಪ್ರಧಾನ ಬೆಳ್ಳಿ ಕಲಶವನ್ನು ಸಮರ್ಪಿಸಿದರು. ನಾಗಮಂಡಲ ನಡೆಯುವ ವೇದಿಕೆಗೆ...

ಕೊನೆ ಕ್ಷಣದಲ್ಲಿ ಮದುವೆ ನಿರಾಕರಿಸಿದ ವಧು : ಕುಟುಂಬಸ್ಥರು ಕಂಗಾಲು

ಉಪ್ಪಿನಂಗಡಿ: ಮದುವೆ ಮಂಟಪದಲ್ಲಿ ವರನಿಂದ ತಾಳಿ ಕಟ್ಟಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಯಲ್ಲಿದ್ದ ಮದುವೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ನಡೆದಿದೆ. ಕೊಣಾಲು ಗ್ರಾಮದ ಕೋಲ್ಪೆ ದಿ| ಬಾಬು...

ಲೋಕಸಭಾ ಚುನಾವಣೆ, ಬಂಟ್ವಾಳದಲ್ಲಿ ಶೇ.79.9 ಮತದಾನ

ಬಂಟ್ವಾಳ ವಿಧಾನ ಸಭಾ ಕ್ಷೇತ್ರದದಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಅಂದಾಜು ಶೇ.79.9 ಮತದಾನವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಅಂದಾಜು ಶೇ.77.44 ರಷ್ಟು ಮತದಾನವಾಗಿದೆ. ಬಿಸಿಲನ್ನು ಲೆಕ್ಕಿಸದೆ, ಸೆಕೆಯ ನಡುವೆಯೂ ಮತದಾರರು ತನ್ನ ಜವಾಬ್ದಾರಿಯನ್ನು...

ಮಧ್ಯಾಹ್ನ 3 ಗಂಟೆಯವರೆಗೆ ದ.ಕ ಜಿಲ್ಲೆಯಲ್ಲಿ ನಡೆದ ಮತದಾನವೆಷ್ಟು…?

ಮಂಗಳೂರು: ಲೋಕಸಭಾ ಚುನಾವಣೆಗೆ ಬಿಸಿಲಿನ ಧಗೆಯ ನಡುವೆಯೂ ಬಿರುಸಿನ ಮತದಾನ ನಡೆಯುತ್ತಿದೆ. ಮಧ್ಯಾಹ್ನ 1 ಗಂಟೆಯವರೆಗೆ 58.65% ಮತ ದಾನ ನಡೆದಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟೆಷ್ಟು ಮತ ಬೆಳ್ತಂಗಡಿ 61.41 ಮೂಡುಬಿದರೆ 54.95 ಮಂಗಳೂರು ಉತ್ತರ 56.76 ಮಂಗಳೂರು ದಕ್ಷಿಣ 51.05 ಮಂಗಳೂರು ಉಳ್ಳಾಲ...