Tuesday, April 16, 2024

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ.

ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಹೆಚ್ಚಿನ ಅಂಗವೈಕಲ್ಯತೆ ಹೊಂದಿದ ಮತದಾರರ ಮನೆಗಳಿಗೆ ಮತಗಟ್ಟೆ ಅಧಿಕಾರಿಗಳ ತಂಡವು ತೆರಳಿ ಮತದಾನ ಮಾಡಿಸುವ ಪ್ರಕ್ರಿಯೆ ದಿನಾಂಕ 15-04-2024 ರಿಂದ ಪ್ರಾರಂಭವಾಗಿರುತ್ತದೆ.

ಕೇಂದ್ರದ ಮಾಜಿ ಸಚಿವ ಜನಾರ್ಧನ ಪೂಜಾರಿಯವರ ಬಿ ಮೂಡಾ ಗ್ರಾಮದ ಬಸ್ತಿಪಡ್ಪುವಿನಲ್ಲಿರುವ ನಿವಾಸಕ್ಕೆ ತೆರಳಿ ದಿನಾಂಕ 16-04-2024 ಮತದಾನ ಪ್ರಕ್ರಿಯೆ ನಡೆಸಲಾಯಿತು. ಮತದಾರರ ಪಟ್ಟಿಯಂತೆ ಇವರಿಗೆ 87 ವರ್ಷ ವಯಸ್ಸಾಗಿದ್ದು, ಈ ಹಿಂದೆ ಭಂಡಾರಿಬೆಟ್ಟು ಶಾಲೆಯ ಭಾಗಸಂಖೈ 130 ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತಿದ್ದರು.

More from the blog

ಮಾಜಿ ಸಿ.ಎಂ.ಕುಮಾರಸ್ವಾಮಿ ಹೇಳಿಕೆ ವಿರೋಧಿಸಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಿ.ಎಂ. ಕುಮಾರ ಸ್ವಾಮಿ ಅವರ ಹೇಳಿಕೆಯನ್ನು ವಿರೋಧಿಸಿ ಬಿಸಿರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ ಪ್ರತಿಭಟನೆ ನಡೆಯಿತು. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು...

ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ಸಾವು

ಮೂಡುಬಿದಿರೆ: ಮೆದುಳು ಜ್ವರ ಉಲ್ಪಣಗೊಂಡ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೂಡುಬಿದಿರೆ ನಿವಾಸಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ ಮೃತ್ಯು. ಸ್ವಸ್ತಿ ಶೆಟ್ಟಿ ಅವರು ಶಿರ್ತಾಡಿ ಮೌಂಟ್‌ ಕಾರ್ಮೆಲ್‌ ಹೈಸ್ಕೂಲ್ ನಲ್ಲಿ ನ...

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...