Saturday, April 13, 2024

ಮಯ್ಯರಬೈಲು: ಏ.14 ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯುಗಾದಿ ಉತ್ಸವ ಕಾರ್ಯಕ್ರಮ

ಮಾತೃಭೂಮಿ ಯುವ ಬಳಗ ಹಾಗೂ ಮಾತೃಭೂಮಿ ಮಹಿಳಾ ಮಂಡಳಿ ಮಯ್ಯರಬೈಲು ಇವರ ಜಂಟಿ ಅಶ್ರಯದಲ್ಲಿ ಚತುರ್ಥ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯುಗಾದಿ ಉತ್ಸವ ಕಾರ್ಯಕ್ರಮ ಏ.14 ರಂದು ಮಯ್ಯರಬೈಲಿನಲ್ಲಿ ಜರಗಲಿದೆ.

ಕಾರ್ಯಕ್ರಮದಲ್ಲಿ ಮೂಡಬಿದ್ರೆ ಶ್ರೀ ಕ್ಷೇತ್ರ ಕರಿಂಜ ಮಠ, ಓಂ ಶ್ರೀ ಶಕ್ತಿ ಗುರು ರಾಘವೇಂದ್ರ ಪೀಠದ ಶ್ರೀ ಶ್ರೀ ಮುಕ್ತಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ.

ಅಧ್ಯಕ್ಷತೆಯನ್ನು ಮಯ್ಯರಬೈಲು ನಿವೃತ್ತ ಅಧ್ಯಾಪಕರು ಪರಮೇಶ್ವರ ಹೆಗಡೆ ವಹಿಸಲಿದ್ದಾರೆ. ದಿಕ್ಕೂಚಿ ಭಾಷಣವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಮಂಗಳೂರು ವಿಭಾಗ ಪ್ರಮುಖ್ ಕೇಶವ ಬಂಗೇರ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪಿಲಿಮೊಗರು ನಿವೃತ್ತ ಮುಖ್ಯೋಪಾಧ್ಯಾಯರು ಗಣೇಶ್ ರಾವ್, ಶಾಸಕರು ರಾಜೇಶ್ ನ್ಯಾಕ್, ಉಳಿಪಾಡಿಗುತ್ತು, ಹಿಂ.ಜಾ.ವೇ ದಕ್ಷಿಣ ಪ್ರಾಂತ್ಯ ಸಮಿತಿ ಸದಸ್ಯರು ಜಗದೀಶ್‌ ನೆತ್ತರಕೆರೆ, ಬಿ.ಸಿ. ರೋಡು ಸುಷ್ಮಾ ಚರಣ್, ಬೆಂಗಳೂರು ಶ್ರೀಧಾಮ ಪಾಲಿಮಾರ್ಸ್ ಉದ್ಯಮಿ ಕೇಶವ ಬಾಳೆಹಿತ್ತು, ಶ್ರೀ ರಾಜಲಕ್ಷ್ಮೀ ಕನ್ಸ್ ಸ್ಟ್ರಕ್ಷನ್ ಗಣೇಶ್ ಕಾಮಾಜೆ, ಸಿದ್ಧಕಟ್ಟೆ ಪ್ರಧಾನಮಂತ್ರಿ ಜನ ಔಷಧಿ ಕೇಂದ್ರ ಮನೋಜ್ ಕುಲಾಲ್ ಸಿದ್ಧಕಟ್ಟೆ, ಬಿ.ಸಿ. ರೋಡು ಧರಣಿ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಮತ್ತು ಮೊಬೈಲ್ಸ್ ಮಾಲಕರು ಸುಮಂತ್ ಪೂಜಾರಿ, ಜ್ಞಾನೇಶ್ ಸೋಮಯಾಜಿ ಮಯ್ಯರಬೈಲು, ಬಂಟ್ವಾಳ ಪುರಸಭಾ ಸದಸ್ಯರು ಹರಿಪ್ರಸಾದ್ ಭಂಡಾರಿಬೆಟ್ಟು, ಲಕ್ಷ್ಮಣ್ ರಾಜ್, ಪಾಣೆಮಂಗಳೂರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರದ ಕರಸೇವೆಯಲ್ಲಿ ಭಾಗವಹಿಸಿದ ಬಿ.ಮೂಡ ಗ್ರಾಮದ ಕರಸೇವಕರಿಗೆ ಸನ್ಮಾನ ನಡೆಯಲಿದೆ.

ಕಾರ್ಯಕ್ರಮ

ಸಂಜೆ ಗಂಟೆ 4-00ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ನಡೆದು, ಸಂಜೆ ಗಂಟೆ 5-00ಕ್ಕೆ ಮಹಾಪೂಜೆ ನಂತರ ಪ್ರಸಾದ ವಿತರಣೆ ನಡೆಯಲಿದೆ. ಬಳಿಕ ಸಂಜೆ ಗಂಟೆ 5-30ಕ್ಕೆ ಶ್ರೀ ಜಗದಂಬಿಕಾ ಭಜನಾ ಮಂಡಳಿ, ಕಿನ್ನಿಬೆಟ್ಟು, ಅಮ್ಟಾಡಿ ಇವರಿಂದ ಭಜನಾ ಕಾರ್ಯಕ್ರಮ ಜರುಗಲಿರುವುದು.

ಸಂಜೆ ಗಂಟೆ 6-00ಕ್ಕೆ ಯುವಜನ ವ್ಯಾಯಾಮ ಶಾಲೆ (ರಿ.) ಭಂಡಾರಿಬೆಟ್ಟು ಇವರಿಂದ ತಾಲೀಮು ಪ್ರದರ್ಶನ ನಡೆದ ಬಳಿಕ ಸಂಜೆ ಗಂಟೆ 6-30ಕ್ಕೆ : ಅಂಗನವಾಡಿ ಮಕ್ಕಳಿಂದ ಮತ್ತು ಸ್ಥಳೀಯ ಪ್ರತಿಭೆಗಳಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಗಂಟೆ 7-30ಕ್ಕೆ  ಸಭಾ ಕಾರ್ಯಕ್ರಮ ನಡೆದು, ರಾತ್ರಿ ಗಂಟೆ 8-30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.

ರಾತ್ರಿ ಗಂಟೆ 9-30ಕ್ಕೆ “ರಂಗಭೂಷಣ” ಮಣಿ ಕೋಟೆಬಾಗಿಲು ಕಥೆ-ಸಂಭಾಷಣೆ-ನಿರ್ದೇಶನ-ಸಾರಥ್ಯದ ಪಿಂಗಾರ ಕಲಾವಿದೆರ್ ಬೆದ್ರ ಅಭಿನಯಿಸುವ ಅದ್ದೂರಿ ರಂಗ ವಿನ್ಯಾಸದ ಕುತೂಹಲಭರಿತ ಹಾಸ್ಯ ನಾಟಕ ಕದಂಬ ನಡೆಯಲಿರುವುದು.

More from the blog

ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ಮತ್ತು ಯುವ ಸ್ಪಂದನ ಸಮಾಲೋಚನೆ ಸೇವೆಗಳ ಕುರಿತು ಕಾರ್ಯಕ್ರಮ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಕಾಮಾಜೆ ಇಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಕೇಂದ್ರ ಎಪಿಡಿಮಿಯೋಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಬೆಂಗಳೂರು,...

ಯುವಮೋರ್ಚಾ ಬಂಟ್ವಾಳ ವತಿಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬಿ. ಸಿ ರೋಡಿನ ರಕ್ತೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ

ಯುವಮೋರ್ಚಾ ಬಂಟ್ವಾಳ ವತಿಯಿಂದ ನರೇಂದ್ರ ಮೋದಿ ಮತೊಮ್ಮೆ ಪ್ರಧಾನಿಯಾಗಲೆಂದು ರಕ್ತೇಶ್ವರಿ ದೇವಸ್ಥಾನ ಬಿ. ಸಿ ರೋಡಿನಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...