Saturday, April 6, 2024

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ” ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ ಗ್ಯಾರಂಟಿ ಬಗೆಗಿನ ಮಾಹಿತಿಯನ್ನು ಮನೆಮನೆಗೆ ತಲುಪಿಸುವಂತೆ ಮನವಿ ಮಾಡಿದ್ದಾರೆ.

ಕಾರ್ಯಕರ್ತರ ಜತೆಗೆ ಆಯೋಜಿಸಿದ್ದ “ಮೇರಾ ಬೂತ್‌ ಸಬ್‌ ಸೆ ಮಜಬೂತ್‌’ ಆನ್‌ಲೈನ್‌ ಸಂವಾದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಸುಪ್ರೀತ್‌ ಭಂಡಾರಿ ಜತೆ ಮಾತನಾಡಿ ಈ ಸೂಚನೆ ನೀಡಿದರು. ಪ್ರತಿ ಬೂತ್‌ನಲ್ಲೂ ಮಹಿಳಾ ಮತದಾರರು ನಿರ್ಣಾಯಕರು. ಅವರನ್ನು ತಲುಪಲು ಕರ್ನಾಟಕದಲ್ಲಿ ನಡೆಸಿರುವ ಕಾರ್ಯ ಯೋಜನೆ ಏನೆಂದು ಪ್ರಶ್ನಿಸಿ, ಮೆಹಂದಿ ಅಭಿಯಾನ ನಡೆಸುವಂತೆ ಸಲಹೆ ನೀಡಿದರು. ಜತೆಗೆ ಉಡುಪಿ ಜತೆಗಿನ ತಮ್ಮ ಅವಿನಾಭಾವ ಸಂಬಂಧವನ್ನು ಮೆಲಕು ಹಾಕಿದ ಮೋದಿ, ದ್ವಾರಕೆ ಹಾಗೂ ಉಡುಪಿಯ ನಂಟನ್ನು ಕಾರ್ಯಕರ್ತರಿಗೆ ವಿವರಿಸಿದರು.

ಮನೆ ಮನೆಗಳ ಮುಂದೆ ಕಮಲದ ರಂಗೋಲಿ ಹಾಕುವುದು ಒಂದು ಕಡೆಗಾದರೆ, ಮಹಿಳಾ ಮತದಾರರನ್ನು ಸೆಳೆಯಲು ಮೆಹಂದಿ ಅಭಿಯಾನ ನಡೆಸಿ. ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ ಬಿಜೆಪಿಯನ್ನು ಪ್ರತಿಮನೆಗೂ ತಲುಪಿಸಿ. ಇದರ ಜತೆಗೆ ವೃತ್ತಿ ನಿರತರು, ಯುವಕರನ್ನೂ ಸಂಪರ್ಕ ಮಾಡಿ. ಮೊದಲ ಬಾರಿ ಮತದಾನ ಮಾಡುವವರಿಗೆ ಮುದ್ರಾ ಯೋಜನೆಯ ಯಶಸ್ಸಿನ ಬಗ್ಗೆ ತಿಳಿಸಿ. ಫ‌ಲಾನುಭವಿಗಳ ಅನುಭವ ಕಥನವನ್ನು ಹೊಂದಿದ ರೀಲ್ಸ್‌ ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ನಡೆಸಿ ಎನ್ನುವ ಮೂಲಕ ಲೋಕಸಭಾ ಸಮರಕ್ಕೆ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಲೋಕಸಭೆಯನ್ನು ಗೆಲ್ಲಬೇಕಿದ್ದರೆ ಮೊದಲು ಬೂತ್‌ ಗೆಲ್ಲಬೇಕು. ಪ್ರತಿ ಬೂತ್‌ನಲ್ಲಿ 370ಕ್ಕೂ ಹೆಚ್ಚು ಮತ ಪಡೆಯಲು ಪ್ರಯತ್ನ ನಡೆಸಬೇಕು. ಮತದಾರರ ಸಂಪೂರ್ಣ ವಿವರವುಳ್ಳ ಪಟ್ಟಿ ತಯಾರಿಸಿ. ಯಾರು ಮತ ಹಾಕುತ್ತಾರೆ, ಹಾಕುವುದಿಲ್ಲ ಎಂಬಿತ್ಯಾದಿ ವಿವರ ಸಂಗ್ರಹಿಸಿ. ಮತ ಹಾಕದೆ ಬೇರೆ ಕಡೆ ಹೋಗುವವರ ಮನವೊಲಿಸಿ. ಬೇಸಗೆ ಕಾಲವಾದ್ದರಿಂದ ಬಿಸಿಲು ಹೆಚ್ಚಾಗುತ್ತಿದೆ. ಬೆಳಗ್ಗೆ ಹೆಚ್ಚು ಮತದಾನ ಆಗುವಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದರು.

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...