Wednesday, April 10, 2024

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು.

ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ ಸಾಮಾಗ್ರಿಗಳನ್ನು ಪ್ರದರ್ಶಿಸಲಾಯಿತು.

ಬಿಎಸ್ಎಸ್ ಬೋರ್ಡ್ ನ ಜಿಲ್ಲಾ ಸಂಯೋಜಕ ರಘು ಕುಮಾರ್ ಉಪ್ಪಳ ಅವರು ಪ್ರಾಕ್ಟಿಕಲ್ ಪರೀಕ್ಷೆ ನಡೆಸಿಕೊಟ್ಟರು. ಮೈಟ್ ಸಂಸ್ಥೆಯ ವತಿಯಿಂದ ಟೀಚರ್ಸ್ ಟ್ರೈನಿಂಗ್ ವಿಭಾಗದ ಮುಖ್ಯಶಿಕ್ಷಕಿ ಸುಶ್ಮಾಮನೋಜ್ ಅವರು ಮಾರ್ಗದರ್ಶನ ನೀಡಿದರು.

ಕಳೆದ 23 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಮೈಟ್ ಸಂಸ್ಥೆಯಲ್ಲಿ 6 ತಿಂಗಳಿನಿಂದ 3 ವರ್ಷದವರೆಗಿನ ಹಲವು ಡಿಪ್ಲೊಮಾ ಕೋರ್ಸ್ ಗಳ ತರಬೇತಿಯನ್ನು ನೀಡಲಾಗುತ್ತಿದೆ. ಎಸ್ ಎಸ್ ಎಲ್ ಸಿ, ಪಿಯುಸಿ ಅಥವಾ ಡಿಗ್ರಿಯ ಬಳಿಕದ ವಿದ್ಯಾರ್ಥಿಗಳು ಈ ಕೋರ್ಸ್ ಆಯ್ಕೆ ಮಾಡಲು ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಮೈಟ್ ಸಂಸ್ಥೆಯನ್ನು ಸಂಪರ್ಕಿಸಬಹುದು. ಸಂಪರ್ಕ ಸಂಖ್ಯೆ: 8310063811, 9448007264

More from the blog

ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ ನಡೆಯಿತು. ಬುಡೋಳಿ ಏನಾಜೆ ಬಿಲಾಲ್ ಮಸ್ಜಿದ್ ಏನಾಜೆ ಬುಡೋಳಿಯಲ್ಲಿ ಮಸೀದಿ ಖತೀಬರಾದ ಅಬ್ದುಲ್ ಮಜೀದ್ ದಾರಿಮೀ ಉಸ್ತಾದ್ ಜುಮ್ಮಾ ನೇತೃತ್ವ ವಹಿಸಿ ಈದ್ ಸಂದೇಶವನ್ನು...

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...