Wednesday, April 10, 2024

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ.

ಏಪ್ರಿಲ್ 14ರಂದು ಮಂಗಳೂರಿನಲ್ಲಿ ಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ನಡೆದ ಬದಲಾವಣೆಯಿಂದ ಬೃಹತ್ ಸಮಾವೇಶವನ್ನು ರದ್ದು ಪಡಿಸಲಾಗಿದ್ದು, ಇದರ ಬದಲು ಪ್ರಧಾನಿಯವರು ಏಪ್ರಿಲ್ 14 ರಂದು 6 ಗಂಟೆಗೆ ಸಂಜೆ ಮಂಗಳೂರಿನಲ್ಲಿ ರೋಡ್ ಶೋ ಮಾತ್ರ ನಡೆಸಲಿದ್ದಾರೆ. ಇನ್ನಷ್ಟೇ ರೋಡ್ ಶೋ ರೂಟ್ ಮ್ಯಾಪ್ ಸಿದ್ಧಪಡಿಸಬೇಕಿದೆ.

 

More from the blog

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ದ.ಕ. ಉಡುಪಿ ಜಿಲ್ಲೆಗೆ ಇಂದು ರಜೆ ಘೋಷಣೆ : ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ

ಮಂಗಳೂರು: ಈದ್ ಉಲ್-ಫಿತರ್ ಪ್ರಯುಕ್ತ ಏಪ್ರಿಲ್ 10ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ರಾಜ್ಯ ಸರ್ಕಾರದ...

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...