Tuesday, April 23, 2024

ನೌಕಾಪಡೆಯ 2 ಹೆಲಿಕಾಪ್ಟರ್ ಪತನ; ಛಿದ್ರ, ಛಿದ್ರವಾದ ನೌಕಾಪಡೆಯ 10 ಮಂದಿ

ಕೌಲಾಲಂಪುರ: ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್‌ಗಳು ಡಿಕ್ಕಿ ಹೊಡೆದು 10 ಮಂದಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.

ಮಲೇಷ್ಯಾದ ಲುಮುಟ್ ಪಟ್ಟಣದ ನೌಕಾನೆಲೆಯಲ್ಲಿ ಹೆಲಿಕಾಪ್ಟರ್​ಗಳು ಪರೇಡ್‌ ನಡೆಸುತ್ತಿರುವಾಗ ಈ ಅವಘಡ ಸಂಭವಿಸಿದೆ. ಅತ್ಯಂತ ಸಮೀಪದಲ್ಲಿ ಹಾರಾಟ ನಡೆಸಿದ ಹೆಲಿಕಾಪ್ಟರ್‌ ಮಧ್ಯೆ ಭಯಾನಕ ಡಿಕ್ಕಿ ಸಂಭವಿಸಿದೆ. ಆಕಾಶದಲ್ಲೇ ಹೆಲಿಕಾಪ್ಟರ್‌ ಛಿದ್ರ, ಛಿದ್ರವಾದ ದೃಶ್ಯಗಳು ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದೆ. ಹೆಲಿಕಾಪ್ಟರ್ ಪತನವಾದ ಭಯಾನಕ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

 

ಪತನವಾದ ಬಳಿಕ ಹೆಲಿಕಾಪ್ಟರ್‌ನ ಅವಶೇಷಗಳು ನೆಲಕ್ಕೆ ಅಪ್ಪಳಿಸಿದ್ದು, ದುರಂತಕ್ಕೆ ಸಾಕ್ಷಿಯಾಗಿದೆ. ಮಲೇಷ್ಯಾ ಮಿಲಿಟರಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.

 

More from the blog

ಬಿಜೆಪಿ ಪಕ್ಷದಿಂದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಉಚ್ಛಾಟನೆ

ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಬಿಜೆಪಿ ಶಿಸ್ತು ಸಮಿತಿ ಸೋಮವಾರ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಅವರು ಸೋಮವಾರ ಈಶ್ವರಪ್ಪ ಅವರನ್ನು ಆರು ವರ್ಷಗಳ ಕಾಲ...

ಕಾಂಗ್ರೇಸ್ ಸರಕಾರದ ಆಡಳಿತದಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ.ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಒಟ್ಟು 28 ಸ್ಥಾನದಲ್ಲಿದಲ್ಲಿ ಗೆಲುವು ಸಾಧಿಸುವುದು ನಿಶ್ವಿತ,ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಅವರು ಬಿಸಿರೋಡಿನ ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು...

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...

ಏಪ್ರಿಲ್ 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಏ.25ರ ಸಂಜೆ 6ರಿಂದ 26ರ ರಾತ್ರಿ 8ರ...