Monday, April 22, 2024

ನೇಹಾ ಕೊಲೆ ಪ್ರಕರಣ ಸಿಐಡಿ ತನಿಖೆಗೆ

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ ವಹಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೃತ ವಿದ್ಯಾರ್ಥಿನಿ ನೇಹಾ ಕೊಲೆಗೆ ಸೂಕ್ತ ನ್ಯಾಯ ದೊರಕಿಸಬೇಕು. ತ್ವರಿತಗತಿಯಲ್ಲಿ ನ್ಯಾಯ ದೊರಕಿಸಿಕೊಡಲು ಸರ್ಕಾರ ಸಿಐಡಿಗೆ ನೀಡಿದೆ. ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ವಹಿಸಿಕೊಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ನಮ್ಮ ಆಡಳಿತ ಅವಧಿಯಲ್ಲಿ ಕಡಿಮೆ ಅಪರಾಧ ಪ್ರಕರಣಗಳು ನಡೆದಿವೆ. ನಮ್ಮ ಆಡಳಿತ ಅವಧಿಯಲ್ಲಿ 1390 ಪ್ರಕರಣಗಳು ನಡೆದಿವೆ. ಬಿಜೆಪಿ ಆಡಳಿತದಲ್ಲಿ ಹೆಚ್ಚು ನಡೆದಿವೆ. ನಮ್ಮ ಆಡಳಿತದಲ್ಲಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಹೇಳಿದರು.

ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಂದು ಹುಬ್ಬಳ್ಳಿ-ಧಾರವಾಡ ನಗರಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ. ಅಂಜುಮನ್ ಸಂಸ್ಥೆಯಿಂದ ಪ್ರತಿಭಟನೆ ನಡೆಸಲಾಗುತ್ತಿದ್ದು, ಹುಬ್ಬಳ್ಳಿ ಶಾಹಾಬಜಾರ ಸೇರಿ ಪ್ರಮುಖ ಮಾರ್ಕೆಟ್‌ಗಳನ್ನು ಬಂದ್ ಮಾಡಲಾಗಿದೆ. ಮುಸ್ಲಿಂ ವ್ಯಾಪಾರಿಗಳಿಂದ ಜಸ್ಟೀಸ್ ಟು ನೇಹಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಆರೋಪಿ ಫಯಾಜ್​ಗೆ ಗಲ್ಲು ಶಿಕ್ಷೆ ಆಗಬೇಕು ಎಂದು ಆಗ್ರಹಿಸಲಾಗಿದೆ. ಹುಬ್ಬಳ್ಳಿ-ಧಾರವಾಡದ ಅವಳಿ ನಗರದಲ್ಲಿ ಇಂದು ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತವಾಗಿದೆ. ಧಾರವಾಡದ ಅಂಜುಮನ್ ಸಂಸ್ಥೆಯಿಂದ ಧಾರವಾಡದ ಡಿಸಿ ಕಚೇರಿವರೆಗೆ ಮೌನ ಮೆರವಣಿಗೆ ನಡೆಸಲಾಗಿದೆ.

ನೇಹಾ ಹತ್ಯೆ ಪ್ರಕರಣವನ್ನು ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ ನಡೆಸಲಾಗಿದೆ. ಇಂತಹ ಘಟನೆಗಳು ಪುನಃ ಮರುಕಳಿಸಬಾರದು. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು, ಕಾರ್ಯಕರ್ತರು, ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರಲ್ಲಿ ಸಂಸದ ಬಿ.ವೈ ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಕಾರವಾರದ ಜಿಲ್ಲಾಧಿಕಾರಿ ಕಚೇರಿಯೆದುರು ನೇಹಾ ಹತ್ಯೆ ಖಂಡಿಸಿ ಬಿಜೆಪಿ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ. ಶಾಸಕ ದಿನಕರ ಶೆಟ್ಟಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಕಲಬುರಗಿಯಲ್ಲೂ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗಿದ್ದು, ಟೈಯರ್‌ಗೆ ಬೆಂಕಿ ಹಚ್ಚಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಮಾಜಿ ಸಚಿವ ಮುರುಗೇಶ ನಿರಾಣಿ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ನೇಹಾ ಕೊಲೆ ಹಿನ್ನೆಲೆ ಭಾವಚಿತ್ರ ಹಿಡಿದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಚಿಕ್ಕೋಡಿಯಲ್ಲೂ ಬಿಜೆಪಿ, ಎಬಿವಿಪಿ ಸೇರಿದಂತೆ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಕೆ.ಸಿ ರಸ್ತೆಯಿಂದ ಬಸವೇಶ್ವರ ವೃತ್ತದವರೆಗೂ ಸಾವಿರಾರು ಜನ ಧರಣಿ ನಡೆಸಿದ್ದು, ಆರೋಪಿ ಫಯಾಜ್‌ಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಲಾಗಿದೆ

More from the blog

ಕಾಂಗ್ರೇಸ್ ಸರಕಾರದ ಆಡಳಿತದಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ.ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಒಟ್ಟು 28 ಸ್ಥಾನದಲ್ಲಿದಲ್ಲಿ ಗೆಲುವು ಸಾಧಿಸುವುದು ನಿಶ್ವಿತ,ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಅವರು ಬಿಸಿರೋಡಿನ ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...