Tuesday, April 9, 2024

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ.

ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ ಇಲ್ಲಿ ಹಸಿರು ಬಣ್ಣದ ಜೊತೆಗೆ ಒಂದು ಭಾಗದಲ್ಲಿ ಸಿಪ್ಪೆ ತೆಗೆದ ರೀತಿಯಲ್ಲಿ ಕಂಡು ಬಂದಿರುವುದಲ್ಲದೆ, ಹಳದಿ ಬಣ್ಣವನ್ನು ಹೊಂದಿದೆ.

ಒಳಗೆ ಇನ್ನೊಂದು ಪದರದಂತೆ ಕಂಡು ಬಂದಿದ್ದು, ವಿಶೇಷ ರೀತಿಯಲ್ಲಿ ಹಣ್ಣು ಬೆಳೆದಿದೆ ಎನ್ನಬಹುದು.

ಈ ಕಿತ್ತಾಳೆ ಹಣ್ಣನ್ನು ಬಿಸಿರೋಡಿನ ಸ್ವಾಗತ‌ ಹೋಟೆಲ್ ಮಾಲಕರು ಮಾರುಕಟ್ಟೆಯಲ್ಲಿ ಹಣ್ಣಿನ ಜೊತೆ ಸಿಕ್ಕಿದ್ದು, ವಿಚಿತ್ರ ರೀತಿಯಲ್ಲಿರುವ ಹಣ್ಣನ್ನು ಹೊಟೇಲ್ ಗೆ ಬಂದ ಗ್ರಾಹಕರಿಗೆ ತೋರಿಸುತ್ತಾರೆ.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...