Sunday, April 14, 2024

ಪ್ರಧಾನಿ ಮೋದಿ ರೋಡ್ ಶೋಗೆ ಸಿದ್ಧತೆ : ರಸ್ತೆಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

ಮಂಗಳೂರು: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ ಶೋ ಇರುವ ಹಿನ್ನೆಲೆಯಲ್ಲಿ ಭಾರೀ ಪೊಲೀಸ್‌ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಶನಿವಾರ ಸಂಜೆಯಿಂದಲೇ ಪೊಲೀಸರು ಕಾರ್ಯ ನಿರತರಾಗಿದ್ದು, ಹೊಸದಿಲ್ಲಿಯಿಂದ ಆಗಮಿಸಿರುವ ಎಸ್‌ಪಿಜಿ ಅಧಿಕಾರಿಗಳು ರೋಡ್‌ ಶೋ ಸಾಗುವ ಮಾರ್ಗದ ಮೇಲೆ ನಿಗಾ ಇಟ್ಟಿದ್ದಾರೆ. ರ್‍ಯಾಲಿ ನಡೆಯುವ ರಸ್ತೆಯುದ್ದಕ್ಕೂ 25ಕ್ಕೂ ಅಧಿಕ ಸಿಸಿ ಟಿವಿ ಕೆಮರಾ ಅಳವಡಿಸಲಾಗಿದೆ.

ರೋಡ್‌ ಶೋ ನಡೆಯುವ ರಸ್ತೆ ಬದಿಗಳ ಕಟ್ಟಡಗಳಲ್ಲಿ ರವಿವಾರ ಉಳಿದು ಕೊಳ್ಳುವವರ ಆಧಾರ್‌ ಕಾರ್ಡ್‌ ದಾಖಲೆಗಳನ್ನು ಪಡೆದುಕೊಳ್ಳಲು ಕಟ್ಟಡ ಮಾಲಕರಿಗೆ ಪೊಲೀಸರು ಸೂಚಿಸಿದ್ದಾರೆ. ಈ ರಸ್ತೆ ರವಿವಾರ ರೋಡ್‌ಶೋಗೆ ಪೂರ್ಣ ಸಿದ್ಧಗೊಳ್ಳಲಿದ್ದು, ಮಧ್ಯಾಹ್ನದ ಬಳಿಕ ಎಲ್ಲ ವಾಹನಗಳ ಸಂಚಾರ ಸ್ಥಗಿತಗೊಳ್ಳಲಿದೆ. ಬಳಿಕ ಪೂರ್ಣವಾಗಿ ಪೊಲೀಸರ ಸುಪರ್ದಿಗೆ ಬರಲಿದೆ.

ಎಡಿಜಿಪಿ, ಐಜಿಪಿ, 5 ಎಸ್‌ಪಿ/ ಡಿಸಿಪಿ, 10 ಡಿವೈಎಸ್‌ಪಿ/ ಎಸಿಪಿ, 36 ಇನ್ಸ್‌ಪೆಕ್ಟರ್‌, 67 ಪಿಎಸ್‌ಐ, 147 ಎಎಸ್‌ಐ, 1,207 ಹೆಡ್‌ಕಾನ್‌ಸ್ಟೆಬಲ್‌/ಕಾನ್‌ಸ್ಟೆಬಲ್‌ಗ‌ಳು, 92 ಗೃಹರಕ್ಷಕರು, 5 ಕೆಎಸ್‌ಆರ್‌ಪಿ ತುಕಡಿ, 19 ಸಿಎಆರ್‌ ತುಕಡಿ, 2 ಸಿಆರ್‌ಪಿಎಫ್ ತುಕಡಿ, 4 ಎಎಸ್‌ಸಿ ತಂಡ, 1 ಬಿಡಿಡಿಎಸ್‌ ತಂಡ, 30 ಡಿಎಫ್ಎಂಡಿ/ಎಚ್‌ಎಚ್‌ಎಂಡಿ, 34 ಸೆಕ್ಟರ್‌ ಮೊಬೈಲ್‌ಗ‌ಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ರೋಡ್ ಶೋನ ಎರಡೂ ಬದಿಗಳಲ್ಲಿ ಎತ್ತರದ ಕಟ್ಟಡಗಳ ಮೇಲೆ ಎಸ್‌ಪಿಜಿ ಸ್ನೈಪರ್‌ಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಚೆನ್ನೈನಲ್ಲಿ ಮೋದಿ ರೋಡ್ ಶೋ ನಡೆಸಿದ ಅದೇ ಟೆಂಪೋ ಮಾದರಿಯ ವಾಹನವನ್ನು ಮಂಗಳೂರಿಗೆ ತರಲಾಗಿದೆ. ಪ್ರಧಾನಿ ಮೋದಿಯವರೊಂದಿಗೆ ಸವಾರಿ ಮಾಡಲು ಅಭ್ಯರ್ಥಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟಾ, ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಅನುಮತಿ ಕೋರಿ ಪತ್ರವನ್ನು ಎಸ್‌ಪಿಜಿಗೆ ಬರೆಯಲಾಗಿದೆ.

More from the blog

ಮೊಸಳೆಯ ಹೊಟ್ಟೆಯಲ್ಲಿ 1 ಕೆ.ಜಿ ಪ್ಲಾಸ್ಟಿಕ್ ಪತ್ತೆ….! ತ್ಯಾಜ್ಯ ಜೀರ್ಣವಾಗದೆ ಮೊಸಳೆ ಸಾವು

ಸುಬ್ರಹ್ಮಣ್ಯ: ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಮೊಸಳೆ ಸಾವಿಗೆ ತ್ಯಾಜ್ಯ ಸೇವನೆ ಹಾಗೂ ಪ್ಲಾಸ್ಟಿಕ್‌ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಕಡಬ-ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು...

ಬೋಳಾರ ಚೂರಿ ಇರಿತ ಪ್ರಕರಣ : ಆರೋಪಿ ಅರೆಸ್ಟ್

ಮಂಗಳೂರು: ಬೋಳಾರ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಆನಂದ್‌ ಸಪಲ್ಯ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಬೋಳಾರ್ ನಲ್ಲಿ ಕಟಿಂಗ್ ಶಾಪ್ ನಡೆಸುತ್ತಿರುವ ಎಡ್ವಿನ್ ವಿನಯ್ ಕುಮಾರ್ ಅವರಿಗೆ...

ಪ್ರಧಾನಿ ಮೋದಿ ರೋಡ್ ಶೋ ಸಮಯ ಬದಲಾವಣೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಸಮಯದಲ್ಲಿ ಬದಲಾವಣೆಯಾಗಿದ್ದು, ಏ.14ರಂದು ಸಂಜೆ 7.45ಕ್ಕೆ ರೋಡ್ ಶೋ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಚುನಾವಣಾ ಸಂಚಾಲಕ ವಿ. ಸುನಿಲ್ ಕುಮಾರ್...

ಕುಮಾರಧಾರಾ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆ

ಸುಬ್ರಹ್ಮಣ್ಯ: ಕುಮಾರಧಾರಾ ನದಿಯ ಪಂಜ – ಕಡಬ ಸಂಪರ್ಕ ರಸ್ತೆಯಲ್ಲಿ ಸಿಗುವ ಪುಳಿಕುಕ್ಕು ಸೇತುವೆಯ ಕೆಳಭಾಗದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದೆ. ಶುಕ್ರವಾರ ನದಿಯ ಒಂದು ಬದಿಯ ನೀರಿನಲ್ಲಿ ಅಂದಾಜು 1.5 – 2 ವರ್ಷದ ಮೊಸಳೆಯ...