Sunday, April 7, 2024

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು.

ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ, ಬಿ.ಸಿ.ರೋಡಿನ ಕೈಕಂಬದಲ್ಲಿರುವ ಪೊಳಲಿ ದ್ವಾರ ಹಾಗೂ ಗುರುಪುರ ಕೈಕಂಬ ಪೊಳಲಿ ದ್ವಾರದಿಂದ ಏಕಕಾಲದಲ್ಲಿ ಪಾದಯಾತ್ರೆ ಹೊರಟು ಪೊಳಲಿ‌ ದೇವಸ್ಥಾನದಲ್ಲಿ‌ ಸಂಪನ್ನಗೊಂಡಿತು.

ವಿ.ಹಿಂ.ಪ.ಬಂಟ್ವಾಳ ಪ್ರಖಂಡದ ಅಧ್ಯಕ್ಷ ಪ್ರಸಾದ್ ಕುಮಾರ್ ರೈ,ವಿ.ಹಿಂ.ಪ. ಹಾಗೂ ಭಜರಂಗದಳದ ಪ್ರಮುಖರಾದ ರಘ ಸಕಲೇಶಪುರ, ಡಾ.ಕೃಷ್ಣಪ್ರಸನ್ನ,ಭರತ್ ಕುಮ್ಡೇಲ್,ಗುರುರಾಜ್ ಬಂಟ್ವಾಳ,ಸಂತೋಷ್ ಸರಪಾಡಿ,ಶಿವಪ್ರಸಾದ್ ತುಂಬೆ,ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಸಹಿತ ನೂರಾರು ಸಂಖ್ಯೆಯಲ್ಲಿ ಸಂಘಟನೆಯ ಕಾರ್ಯಕರ್ತರು,ಭಕ್ತರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ‌ ಪೊಳಲಿ

ಕ್ಷೇತ್ರದಲ್ಲಿ ವಸ್ತ್ರ ಸಂಹಿತೆ ಕ್ರಮಬದ್ಧವಾಗಿ ಜಾರಿಗೊಳಿಸಬೇಕು, ಕ್ಷೇತ್ರದ ವತಿಯಿಂದ ಗೋಶಾಲೆ ನಿರ್ಮಾಣಗೊಳ್ಳಬೇಕು, ಹಿಂದೂ ಸಮಾಜಕ್ಕೆ ಧಾರ್ಮಿಕ ಶಿಕ್ಷಣದ ಅಗತ್ಯತೆ ಇರುವುದರಿಂದ ಬಾಲ ಸಂಸ್ಕಾರ ಕೇಂದ್ರದಂತಹ ಧಾರ್ಮಿಕ ಶಿಕ್ಷಣ ಕೇಂದ್ರ ಸ್ಥಾಪನೆ ಮಾಡಬೇಕು, ಬಡ ಹಿಂದೂ ಕುಟುಂಬಗಳಿಗೆ ನೆರವಾಗುವಂತೆ ಸಾಮೂಹಿಕ ಮದುವೆ ಕಾರ್ಯಕ್ರಮ ನಡೆಯಬೇಕು ಎಂದು ಆಗ್ರಹಿಸಿ ಪೊಳಲಿ ಶ್ರೀರಾಜರಾಜೇಶ್ವರಿ ದೇವಳದ ಆಡಳಿತ ಸಮಿತಿಗೆ ಮನವಿಯನ್ನು‌ ಸಲ್ಲಿಸಲಾಯಿತು.

ದೇವಳದ ಪರವಾಗಿ ನಾಗೇಶ್ ರಾವ್ ಮನವಿಯನ್ನು ಸ್ವೀಕರಿಸಿದರು.

More from the blog

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...