Wednesday, April 24, 2024

ಬಸ್ ನಲ್ಲಿ ಯುವತಿಗೆ ಕಿರುಕುಳ : ಸಂತ್ರಸ್ತ ಯುವತಿಯ ಮನೆಗೆ ಡಾ| ಪ್ರಭಾಕರ್ ಭಟ್ ಭೇಟಿ

ಬಂಟ್ವಾಳ:ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಗುಂಡ್ಯದಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಸಂತ್ರಸ್ತ ಯುವತಿಯ ಮನೆಗೆ ಆರ್.ಎಸ್.ಎಸ್.ಪ್ರಮುಖರಾದ ಡಾ| ಪ್ರಭಾಕರ್ ಭಟ್ ಬೇಟಿ ನೀಡಿ ಪ್ರಕರಣವನ್ನು ದೈರ್ಯವಾಗಿ ಎದುರಿಸಿದ ಯುವತಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ ಅವರು ಕಾನೂನು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.

ಇಂತಹ ಪ್ರಕರಣಗಳು ನಿತ್ಯನಿರಂತರವಾಗಿ ನಡೆಯುತ್ತಿದೆ, ಭಯೋತ್ಪಾದಕರ ರೀತಿಯಲ್ಲಿ ಹೆಣ್ಮಕ್ಕಳ ಮೇಲೆ ಅನಾಚಾರ ಮಾಡುವಂತಹ ಘಟನೆಗಳು ನಡೆಯುತ್ತಿದೆ.

ಸರಕಾರ ಹಾಗೂ ಪೋಲಿಸ್ ‌ಇಲಾಖೆ ಸರಿಯಾದ ಕ್ರಮ ಕೈಗೊಳ್ಳಬೇಕಾಗಿದೆ.ಇಲ್ಲದಿದ್ದರೆ ಅರಾಜಕತೆ ನಿರ್ಮಾಣ ಮಾಡುವ ಸಾಧ್ಯತೆಗಳಿವೆ,ಇದು ದ‌.ಕ.ಜಿಲ್ಲೆ. ಎಚ್ಚರಿಕೆಯ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದೇನೆ. ಸರಕಾರ ಬಂದ ಮೇಲೆ ಬಾರಿ ಪ್ರಮಾಣದಲ್ಲಿ ನಡೆಯುತ್ತಲೇ ಇದೆ. ಮುಂದುವರಿದು ಹುಬ್ಬಳ್ಳಿಯಲ್ಲಿ ಹತ್ಯೆ ನಡೆದಿದೆ, ಇದೀಗ ಮತ್ತೊಂದು ಪ್ರಕರಣ ಅದೇ ಭಾಗದಲ್ಲಿ ನಡೆದಿದೆ. ಹಿಂದೂ ಸಮಾಜದ ಮೇಲೆ ಮತ್ತು ಹೆಣ್ಣ್ಮಕ್ಕಳ ಮೇಲೆ ಅನ್ಯಾಯಗಳು ನಡೆದರೆ ಅದನ್ನು ಬಲವಾಗಿ ಖಂಡಿಸುತ್ತೇವೆ ಎಂದ ಅವರು

ಸರಕಾರ ಎಚ್ಚೆತ್ತು ಸರಿಯಾದ ಕ್ರಮಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು.

More from the blog

ಬಿಜೆಪಿ ಗ್ಯಾರಂಟಿ ಬಿಜೆಪಿಯವರ ಬಾಯಲ್ಲಿದೆ, ಕಾಂಗ್ರೆಸ್ ಗ್ಯಾರಂಟಿ ಜನರ ಕೈಯಲ್ಲಿದೆ- ಮಾಜಿ ಸಚಿವ ಬಿ.ರಮಾನಾಥ ರೈ

ಕಾಂಗ್ರೆಸ್ ಗ್ಯಾರಂಟಿ ಸರಿಯಾ? ಮೋದಿ ಗ್ಯಾರಂಟಿಯಾ? ಇದು ಚರ್ಚೆಯಾಗಬೇಕಿದೆ, ಕೇಂದ್ರದ ಬಿಜೆಪಿ ಸರಕಾರ ವಚನ ಭ್ರಷ್ಟ ಸರಕಾರವಾಗಿದೆ, ಬಿಜೆಪಿ ಗ್ಯಾರಂಟಿ ಬಿಜೆಪಿಯವರ ಬಾಯಲ್ಲಿದೆ,ಕಾಂಗ್ರೆಸ್ ಗ್ಯಾರಂಟಿ ಜನರ ಕೈಯಲ್ಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ...

ಕೆ.ಎಸ್.ಎಸ್.ಕಾಲೇಜ್: ಅಧ್ಯಯನ ವಿನಿಮಯ ಕಾರ್ಯಕ್ರಮ 

ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ವಾಣಿಜ್ಯಶಾಸ್ತ್ರ ಮತ್ತು ಉದ್ಯಮಾಡಳಿತ ವಿಭಾಗವು ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಆಶ್ರಯದಲ್ಲಿ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದೊಂದಿಗೆ ಮಾಡಿಕೊಂಡ ಎಂ.ಓ.ಯು .ಪ್ರಕಾರ ಅಧ್ಯಯನ ವಿನಿಮಯ ಕಾರ್ಯಕ್ರಮ...

ವಿಟ್ಲದಲ್ಲಿ ಬಿಜೆಪಿಯಿಂದ ರೋಡ್ ಶೋ: ಮತಯಾಚನೆ 

ವಿಟ್ಲ: ದ.ಕ ಜಿಲ್ಲಾ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ವಿಟ್ಲದಲ್ಲಿ ಬಿಜೆಪಿಯಿಂದ ರೋಡ್ ಶೋ ನಡೆಯಿತು. ವಿಟ್ಲದ ಜೈನ ಬಸದಿಯಿಂದ ಹೊರಟ ರೋಡ್ ಶೋ ವಿಟ್ಲ ಮುಖ್ಯ ಪೇಟೆಯಲ್ಲಿ ಸಂಚರಿಸಿ,...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ನ ಹಿಂದುಳಿದ ವರ್ಗಗಳ ಘಟಕದ ಸಭೆ

ಬಂಟ್ವಾಳ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಬಂಟ್ವಾಳ ಮತ್ಗು ಪಾಣೆಮಂಗಳೂರು ಬ್ಲಾಕ್ ನ ಹಿಂದುಳಿದ ವರ್ಗಗಳ ಘಟಕದ ಸಭೆ ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು. ಹಿಂದುಳಿದ...