Monday, April 15, 2024

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು.

ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

ರಾಜಕೀಯದ ಕನಸು ಕಂಡವನು ನಾನಲ್ಲ. ಆದರೆ ಎಲ್ಲರ ಒತ್ತಾಸೆಯ ಮೇರೆಗೆ ರಾಜಕೀಯಕ್ಕೆ ಬರುವಂತಾಯಿತು. ನಾರಾಯಣಗುರುಗಳ ಆದರ್ಶವನ್ನೇ ಮೂಲವಾಗಿಟ್ಟುಕೊಂಡು ಸಾಮಾಜಿಕ ಕಾರ್ಯಗಳಿಗೆ ಮುಂದಾದೆ. ಇಂದು ರಾಜಕೀಯದ ಅವಕಾಶವೂ ಸಿಕ್ಕಿತು. ಈ ಅವಕಾಶವನ್ನು ಸಮಾಜದ, ಹಿಂದುಳಿದ ವರ್ಗದ, ಆರ್ಥಿಕ ಹಿಂದುಳಿದವರ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು. ಮುಂದಿನ ದಿನ ಪ್ರತಿ ಮೂರು ತಿಂಗಳಿಗೊಮ್ಮೆ ಎಲ್ಲಾ ಸಮುದಾಯದವರ ಸಭೆ ಕರೆದು, ಅಹವಾಲು ಸ್ವೀಕರಿಸುವ ಕೆಲಸ ಮಾಡಲಾಗುವುದು. ಇದರ ಜೊತೆಗೆ ಉಚಿತವಾಗಿ ಶಿಕ್ಷಣ, ಆರೋಗ್ಯ ಸೇವೆ ಸಿಗಬೇಕು ಎಂಬ ಆಲೋಚನೆ ನನ್ನದು ಎಂದರು.

ಕೆಪಿಸಿಸಿ ಸದಸ್ಯ ಇನಾಯತ್ ಅಲಿ, ಪಣಂಬೂರು ಮೊಗವೀರ ಮಹಾಸಭಾ ಅಧ್ಯಕ್ಷ ಮಾಧವ ಸುವರ್ಣ, ಗುರಿಕ್ಕಾರ ಅಮರನಾಥ ಸುವರ್ಣ ಪುರುಷೋತ್ತಮ ಚಿತ್ರಾಪುರ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಗಿರೀಶ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

More from the blog

ಹಿರಿಯ ಮತ್ತು ಅಂಗವಿಕಲ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ

ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಜಾಸ್ತಿ ಅಂಗವೈಕಲ್ಯತೆ ಹೊಂದಿರುವ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುವ...

ಉಳ್ಳಾಲದಲ್ಲಿ ರಾರಾಜಿಸಿದ ಕಾಂಗ್ರೆಸ್ ರೋಡ್ ಶೋ… ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಜನತೆ

ಉಳ್ಳಾಲ: ರೋಡ್ ಶೋ ಮೂಲಕ ನಡೆಸಿದ ಚುನಾವಣಾ ಪ್ರಚಾರ ಕಾರ್ಯ ಕಾಂಗ್ರೆಸ್'ಗೆ ಹೊಸ ಉತ್ಸಾಹ ತುಂಬುವಲ್ಲಿ ಸಫಲವಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದು, ಅಭೂತಪೂರ್ವ...

ಪುಣಚ: ನಿರ್ಮಾಣ ಹಂತದ ಸೇತುವೆ ಕುಸಿತ : 7 ಮಂದಿ ಕಾರ್ಮಿಕರಿಗೆ ಗಾಯ

ವಿಟ್ಲ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಏಳು ಮಂದಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುಣಚ ಗ್ರಾಮದಲ್ಲಿ ನಡೆದಿದೆ. ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಸೇತುವೆಯ ಕೊನೆಯ...

ಶರಾಬು ಕುಡಿಯಲು ಆಕ್ಷೇಪ… ಯುವಕನಿಗೆ ಹಲ್ಲೆ : ದೂರು, ಪ್ರತಿದೂರು ದಾಖಲು

ಮಚ್ಚಿನ: ಹೊಟೇಲ್‌ ಕಾರ್ಮಿಕನನ್ನು ಶರಾಬು ಕುಡಿಯಲು ಕರೆಯಬಾರದು ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ಸಂಭವಿಸಿದೆ. ಮಚ್ಚಿನದ ಪ್ರತಿಭಾ ರೈ ಅವರ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ ಅವರನ್ನು ಆರೋಪಿ...