Monday, April 29, 2024

ಜೆಡಿಎಸ್ ಪಕ್ಷದಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್‌.ಡಿ ದೇವೇಗೌಡರು ಮಹತ್ವದ ಆದೇಶ ನೀಡಿದ್ದಾರೆ.

ಹಾಸನದಲ್ಲಿ ಹರಿದಾಡಿದ ಅಶ್ಲೀಲ ವಿಡಿಯೋ ಪ್ರಕರಣ ಜೆಡಿಎಸ್ ಪಕ್ಷದಲ್ಲಿ ಮುಜುಗರ ಹಾಗೂ ತೀವ್ರ ಸಂಚಲನ ಸೃಷ್ಟಿಸಿತ್ತು. ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಗಂಭೀರ ಆರೋಪ ಹಾಗೂ ಎಫ್‌ಐಆರ್ ದಾಖಲಾದ ಮೇಲೆ ಜೆಡಿಎಸ್ ನಾಯಕರು ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದಲೇ ವಜಾಗೊಳಿಸುವಂತೆ ಆಗ್ರಹಿಸಿದ್ದರು.

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಪ್ರಕರಣ ಇಡೀ ದೇಶಾದ್ಯಂತ ಸಂಚಲನ ಸೃಷ್ಟಿಸಿದ ಮೇಲೆ ಜೆಡಿಎಸ್ ವರಿಷ್ಠ, ಹೆಚ್‌.ಡಿ ದೇವೇಗೌಡರು ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟಿಸುವ ನಿರ್ಧಾರ ಕೈಗೊಂಡಿದ್ದಾರೆ.

More from the blog

ಕೆದಂಬಾಡಿ: ಯುವಕ ನಾಪತ್ತೆ

ಪುತ್ತೂರು: ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆರೆಮೂಲೆ ದಿ.ಸಂಖಪ್ಪ ಪೂಜಾರಿ ಅವರ ಪುತ್ರ ದಿವಾಕರ ನಾಪತ್ತೆಯಾದವರು. ಅರಿಯಡ್ಕ ಗ್ರಾಮದ ಕೆರೆಮೂಲೆಯವರಾದ ದಿವಾಕರ ಅಡುಗೆ ಕೆಲಸಕ್ಕೆ ಸಹಾಯಕರಾಗಿ ಹೋಗುತ್ತಿದ್ದು,...

3 ವಾರದಲ್ಲಿ ಬೆಂಗಳೂರಿನ 7,324 ಮಂದಿಗೆ ಅತಿಸಾರ ಸಮಸ್ಯೆ : ಮುನ್ನೆಚ್ಚರಿಕೆ ಏನು…?

ಬಿರು ಬಿಸಿಲಿನ ತಾಪಕ್ಕೆ ಮನೆಯಿಂದ ಹೊರ ಹೋಗಲು ಕೂಡ ಜನರು ಪರದಾಡುವಂತಾಗಿದೆ. ದಿನ ಕಳೆದಂತೆ ಈ ಬಿಸಿ ಶಾಖ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಏಪ್ರಿಲ್‌ನಲ್ಲಿ ಎರಡನೇ ಬಾರಿ ಬರೋಬ್ಬರಿ 38 ಡಿಗ್ರಿ ಸೆಲ್ಸಿಯಸ್...

ಬಿಗ್ ಶಾಕ್..! ಮತ್ತೆ ಹೆಚ್ಚಾಗುತ್ತಿದೆ ಬಿರು ಬಿಸಿಲು

ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯದಲ್ಲಿ ಬಿರು ಬಿಸಿಲಿನ ತಾಪಮಾನ ಜಾಸ್ತಿಯಾಗುತ್ತಿದೆ. ಇಂದು ರಾಜ್ಯ ರಾಜಧಾನಿ ಬೆಂಗಳೂರಲ್ಲಿ 36 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ನಾಳೆ, ನಾಡಿದ್ದು 37, 38 ಡಿಗ್ರಿ ಉಷ್ಣಾಂಶ ದಾಖಲಾಗುವ ಮುನ್ಸೂಚನೆಗಳಿವೆ. ಬಿಸಿಲಿನ...

ಲೋಕಸಭಾ ಚುನಾವಣೆ : ಶೇಕಡಾವಾರು ಮತದಾನದ ವಿವರ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ 14 ಕ್ಷೇತ್ರಗಳಿಗೆ ಮತದಾನ ನಡೆಯಿತು. ಸಂಜೆ 7 ಗಂಟೆಯ ವೇಳೆಗೆ ಬಂದ ಮಾಹಿತಿ ಪ್ರಕಾರ 14 ಕ್ಷೇತ್ರಗಳಲ್ಲಿ ಶೇಕಡಾ 65ರಷ್ಟು ಮತದಾನವಾಗಿದೆ. ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಕಡಿಮೆ ಪ್ರಮಾಣದ...