Friday, April 5, 2024

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ ಎಂಬ ಸಂಶಯವಿದೆ,ಮುಖದಲ್ಲಿ ಜಜ್ಜಿದ ಗಾಯ,ಮುಖದಲ್ಲಿ ಪರಚಿದ ಗಾಯವಾಗಿದ್ದು ಇದೊಂದು‌ ವ್ಯವಸ್ಥಿತ ಕೊಲೆ ಎಂಬ ಸಂಶಯವಿದೆ ಎಂದು ಜಿ.ಪಂ.ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಆರೋಪ ಮಾಡಿದ್ದಾರೆ.
ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದರು.

ಪದ್ಮನಾಭ ಅವರು ಆರ್.ಟಿ.ಕಾರ್ಯಕರ್ತನಾಗಿದ್ದು, ಬಂಟ್ವಾಳದಲ್ಲಿ ನಡೆದ ಅನೇಕ ಅಕ್ರಮ ಹಾಗೂ ಭ್ರಷ್ಟಾಚಾರ ಹಾಗೂ ಬಿಜೆಪಿ ಪಕ್ಷದ ಮುಖಂಡರು ಸೇರಿದಂತೆ ಸಮಾಜದಲ್ಲಿ ನಡೆಯುವ ಅನ್ಯಾಯದ ವಿರುದ್ದ ಹೋರಾಟ ಹಾಗೂ ಅನೇಕ ಅಕ್ರಮಗಳನ್ನು ಬಯಲಿಗೆಳೆಯುವಲ್ಲಿ ಯಶಸ್ವಿಯಾಗಿದ್ದ.
ಹಾಗಾಗಿ ಸುಮಾರು ಸಮಯದ ಹಿಂದೆ ಬೈಕಿನಲ್ಲಿ ಬಂದು ಕೊಲೆ ಮಾಡಲು ಹೊಂಚು ಹಾಕಿದ್ದರು. ಬೆದರಿಕೆ ಕರೆಗಳು ಬಂದಿದ್ದು ಈ ಬಗ್ಗೆ ಪೊಲೀಸ್ ಠಾಣೆಗಳಿಗೆ ಅನೇಕ ದೂರುಗಳನ್ನು ನೀಡಿದ್ದ.

ಪದ್ಮನಾಭ ಸೇವಂತನ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬೆನ್ನಲ್ಲೆ ಈತನ ಮೃತದೇಹ ಸಿಕ್ಕಿದ್ದು,ಇದೊಂದು ಕೊಲೆ ಎಂಬ ಸಂಶಯವಿದೆ.
ದೂರು ನೀಡಿದ ಕೂಡಲೇ ಈತನ ಸಾವು ನಡೆದಿದೆ ಎಂದಾದರೆ ಈ ಸಾವಿಗೆ ಕಾರಣವಾದವರನ್ನು ತನಿಖೆ ಮಾಡಬೇಕು.
ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಇದರ ಸರಿಯಾದ ತನಿಖೆಯನ್ನು ಮಾಡಬೇಕು ಎಂದು ಒತ್ತಾಯ ಮಾಡುತ್ತೇವೆ ಎಂದರು.
ಪೋಲೀಸರು ಕೂಡಲೇ ಕ್ರಮ ಕೈಗೊಂಡು‌ ತನಿಖೆ ಪ್ರಾರಂಭ ಮಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡುತ್ತೇವೆ ಎಂದು ತಿಳಿಸಿದರು.
ಬಂಟ್ವಾಳದ ಪ್ರಕರಣವೊಂದರ ವಿಚಾರವಾಗಿ ಬೆದರಿಕೆ ಇದ್ದ ಕಾರಣಕ್ಕಾಗಿ ಬೆಂಗಳೂರು ಮಹಾನಿರ್ದೇಶಕರಿಗೆ ಹಿಂದೆಯೇ ದೂರುನ್ನು ಕೂಡ ಸೇವಂತ ಅವರು ನೀಡಿದ್ದರು ಎಂದು ತಿಳಿಸಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ, ಪದ್ಮನಾಭ ಸೇವಂತ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಕೊಲೆ ಎಂಬುದು ಸಾಬೀತಾದರೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಹೋರಾಟದ ಮೂಲಕ ಸಾವಿಗೆ ನ್ಯಾಯ ಒದಗಿಸುವ ಕೆಲಸ ಕಾಂಗ್ರೆಸ್ ಮಾಡಲಿದೆ ಎಂದು ತಿಳಿಸಿದರು.
ಮಾಜಿ ಜಿ.ಪಂ.ಸದಸ್ಯ ಪದ್ಮಸೇಖರ್ ಜೈನ್ ,
ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ ರೊಡ್ರಿಗಸ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಶೆಟ್ಟಿ ಉಪಸ್ಥಿತರಿದ್ದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...