Wednesday, April 10, 2024

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ.

2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೇ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಅನೇಕ ವಿದ್ಯಾರ್ಥಿಗಳಿಗೆ ತಮಗೆ ಬರಬೇಕಾದ ಅಂಕ ಬಂದಿಲ್ಲ ಅಥವಾ ಸಂದೇಹಗಳಿದ್ದರೇ, ಅಥವಾ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್​​ ಪ್ರತಿಗಾಗಿ, ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಮೌಲ್ಯಮಾಪನ ಮಂಡಳಿ ಹೇಳಿದೆ.

ಉತ್ತರ ಪತ್ರಿಕೆ ಸ್ಕ್ಯಾನ್ಡ್​​​ ಪ್ರತಿಯನ್ನು ಪಡೆಯಲು ಏಪ್ರಿಲ್​ 16ರ ತನಕ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆ ಸ್ಕ್ಯಾನ್ಡ್​​ ಪ್ರತಿಯನ್ನು ಡೌನ್​ಲೋಡ್ ಮಾಡಿಕೊಳ್ಳಲು ಏಪ್ರಿಲ್​ 19ರ ತನಕ, ಮತ್ತು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಏಪ್ರಿಲ್​ 14 ರಿಂದ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ದ್ವೀತಿಯ ಪಿಯುಸಿ ಪರೀಕ್ಷೆ 1ರ ವಿದ್ಯಾರ್ಥಿಗಳ ಫಲಿತಾಂಶ ಪ್ರತಿಯನ್ನು ಕೆಎಸ್​ಇಬಿಯು ಈಗಾಗಲೆ ಆಯಾ ಕಾಲೇಜು ಮಂಡಳಿಗಳಿಗೆ ಕಳುಹಿಸಿದೆ. ಇನ್ನು ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವವರು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಿಲ್ಲ. ಮರು ಮೌಲ್ಯಮಾಪನದ ಮತ್ತು ಮರು ಎಣಿಕೆಯ ಫಲಿತಾಂಶವನ್ನು ಮಂಡಳಿಯು http://kseab.karnataka.gov.in ಎಂಬ ವೆಬ್​ಸೈಟ್​ನಲ್ಲಿ ಪ್ರಕಟಿಸಲಿದೆ.

ಮರುಮೌಲ್ಯಮಾಪನ 2024 ಕ್ಕೆ ಅರ್ಜಿ ಸಲ್ಲಿಸುವುದು ಹೇಗೆ…?

  • ಅಧಿಕೃತ ವೆಬ್‌ಸೈಟ್ – http://kseab.karnataka.gov.in ಗೆ ಭೇಟಿ ನೀಡಿ
  • ಸ್ಕ್ಯಾನ್ ಮಾಡಿದ ಪ್ರತಿಗಳ ಅರ್ಜಿ ನಮೂನೆಗಾಗಿ ಲಿಂಕ್ ಅನ್ನು ಕ್ಲಿಕ್ ಮಾಡಿ
  • ಅರ್ಜಿ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ
  • ಫಾರ್ಮ್ ಜೊತೆಗೆ ಅರ್ಜಿ ಶುಲ್ಕವನ್ನು ಸಲ್ಲಿಸಿ
  • ಭವಿಷ್ಯದ ಉಲ್ಲೇಖಕ್ಕಾಗಿ ಸ್ವೀಕೃತಿ ಫಾರ್ಮ್ ಡೌನ್‌ಲೋಡ್ ಮಾಡಿ

ಸ್ಕ್ಯಾನ್ ಮಾಡಿದ ಪ್ರತಿಗಳಿಗೆ ಅರ್ಜಿ ಸಲ್ಲಿಸಿದ ನಂತರ, ಅಭ್ಯರ್ಥಿಗಳು ತಮ್ಮ ಸ್ಕ್ಯಾನ್ ಮಾಡಿದ ಉತ್ತರ ಪತ್ರಿಕೆಗಳ ಪಿಡಿಎಫ್ ಅನ್ನು ಸ್ವೀಕರಿಸುತ್ತಾರೆ. ನಂತರ ಅವರು ಮರುಪರಿಶೀಲಿಸಲು ಬಯಸುವ ಉತ್ತರಗಳನ್ನು ಶಾರ್ಟ್‌ಲಿಸ್ಟ್ ಮಾಡಬಹುದು. ಮರುಮೌಲ್ಯಮಾಪನ ಅರ್ಜಿಯುನ್ನು ಕೂಡ ಮೇಲೆ ತಿಳಿಸಿದ ವಿಧಾನದ ಮೂಲಕ ಭರ್ತಿ ಮಾಡಿ. ಪ್ರತಿ ವಿಷಯದ ಸ್ಕ್ಯಾನ್​ ಮಾಡಿದ ಪ್ರತಿಗೆ 530ರೂ. ನಿಗದಿಪಡಿಸಲಾಗಿದೆ. ಪ್ರತಿ ವಿಷಯದ ಮೌಲ್ಯಮಾಪನಕ್ಕೆ 1,670 ರೂ. ನಿಗದಿ ಮಾಡಲಾಗಿದೆ.

More from the blog

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...

ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ ನಡೆಯಿತು. ಬುಡೋಳಿ ಏನಾಜೆ ಬಿಲಾಲ್ ಮಸ್ಜಿದ್ ಏನಾಜೆ ಬುಡೋಳಿಯಲ್ಲಿ ಮಸೀದಿ ಖತೀಬರಾದ ಅಬ್ದುಲ್ ಮಜೀದ್ ದಾರಿಮೀ ಉಸ್ತಾದ್ ಜುಮ್ಮಾ ನೇತೃತ್ವ ವಹಿಸಿ ಈದ್ ಸಂದೇಶವನ್ನು...

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...