Wednesday, April 17, 2024

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗುತ್ತಿಗೆದಾರ ಕಡಬದ ನಿವಾಸಿ ರಾಜೇಂದ್ರ ಪ್ರಸಾದ್ ಶೆಟ್ಟಿ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯಲ್ಲಿ ಘಟನೆಯಲ್ಲಿ ಗಾಯಗೊಂಡ ಏಳು ಮಂದಿಯ ಪೈಕಿ ಆರು ಮಂದಿಗೆ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಪುತ್ತೂರು ಆಸ್ಪತ್ರೆಯಲ್ಲಿ ಓರ್ವ ಪ್ರಥಮ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾನೆ.

ಮಲ್ಲಿಪ್ಪಾಡಿಯಲ್ಲಿ ಹಾದು ಹೋಗುವ ತೋಡಿಗೆ ಸೇತುವೆ ನಿರ್ಮಾಣ ಕಾರ್ಯ ಸದ್ಯಕ್ಕೆ ಸ್ಥಗಿತಗೊಂಡಿದ್ದು ಕುಸಿದು ಬಿದ್ದ ವಸ್ತುಗಳನ್ನು ತೆರವುಗೊಳಿಸಲಾಗುತ್ತಿದೆ. ಏ.15 ರಂದು ಸಂಜೆ ಈ ಘಟನೆ ನಡೆದಿದ್ದು, ಸೇತುವೆಯ ಕೊನೆಯ ಕ್ಷಣದ ಸ್ಲ್ಯಾಬ್ ನಿರ್ಮಾಣಕ್ಕಾಗಿ ಕಾಂಕ್ರಿಟ್ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ಅವಘಡ ನಡೆದಿತ್ತು. ಕಾಂಕ್ರಿಟ್ ಕಾಮಗಾರಿ ಸೇತುವೆ ತಳಭಾಗದಿಂದ ತಾತ್ಕಾಲಿಕವಾಗಿ ಅಳವಡಿಸಿದ್ದ ಕಬ್ಬಿಣದ ರಾಡ್ ಆಕಸ್ಮಿಕವಾಗಿ ಜಾರಿ ಕಬ್ಬಿಣದ ರಾಡ್, ಕಾಂಕ್ರಿಟ್ ಮಿಕ್ಸ್ ಎಲ್ಲವೂ ಕುಸಿದು ಬಿದ್ದು ಕಾರ್ಮಿಕರು ಗಾಯಗೊಂಡಿದ್ದರು.

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...