Monday, April 15, 2024

ಪುಣಚ: ನಿರ್ಮಾಣ ಹಂತದ ಸೇತುವೆ ಕುಸಿತ : 7 ಮಂದಿ ಕಾರ್ಮಿಕರಿಗೆ ಗಾಯ

ವಿಟ್ಲ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಏಳು ಮಂದಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುಣಚ ಗ್ರಾಮದಲ್ಲಿ ನಡೆದಿದೆ.

ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದ ಸಮಯ ತಳಭಾಗದಿಂದ ನೀಡಿದ ರಾಡ್ ಜಾರಿ ಮೇಲ್ಭಾಗ ಸಂಪೂರ್ಣ ಕುಸಿದಿದೆ.

ಈ ವೇಳೆ ಕೆಲಸದಲ್ಲಿ ನಿರತರಾಗಿದ್ದ ಏಳು ಮಂದಿ ಅದರಡಿಯಲ್ಲಿ ಸಿಲುಕಿದ್ದರು. ಅವರನ್ನು ಸ್ಥಳದಲ್ಲಿದ್ವವರು ರಕ್ಷಿಸಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

More from the blog

ಶರಾಬು ಕುಡಿಯಲು ಆಕ್ಷೇಪ… ಯುವಕನಿಗೆ ಹಲ್ಲೆ : ದೂರು, ಪ್ರತಿದೂರು ದಾಖಲು

ಮಚ್ಚಿನ: ಹೊಟೇಲ್‌ ಕಾರ್ಮಿಕನನ್ನು ಶರಾಬು ಕುಡಿಯಲು ಕರೆಯಬಾರದು ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ಸಂಭವಿಸಿದೆ. ಮಚ್ಚಿನದ ಪ್ರತಿಭಾ ರೈ ಅವರ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ ಅವರನ್ನು ಆರೋಪಿ...

ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿಂದೂ ಯುವಸೇನೆಯ ಪುಷ್ಪರಾಜ್ ಜಕ್ರಿಬೆಟ್ಟು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಶಾಸಕ ರಾಜೇಶ್ ನಾಯ್ಕ್

ಚೂರಿ ಇರಿತಕ್ಕೊಳಗಾಗಿ ಮಂಗಳೂರು ಏ.ಜೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿಂದೂ ಯುವಸೇನೆಯ ಪುಷ್ಪರಾಜ್ ಜಕ್ರಿಬೆಟ್ಟು ಇವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿಯಾಗಿ ಆರೋಗ್ಯ ವಿಚಾರಿಸಿ,ಮುಂದಿನ ಚಿಕಿತ್ಸೆಯ ಬಗ್ಗೆ ವೈದ್ಯರುಗಳೊಂದಿಗೆ ಮಾಹಿತಿ ಪಡೆದರು.

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...