Monday, April 22, 2024

ಮತದಾನ ಬಹಿಷ್ಕಾರ ; ಕೋವಿ ಠೇವಣಿದಾರರಿಂದ ಫ್ಲೆಕ್ಸ್ ಅಳವಡಿಕೆ

ಪುಂಜಾಲಕಟ್ಟೆ: ಚುನಾವಣೆಯ ಸಂದರ್ಭದಲ್ಲಿ ರೈತರು ತಮ್ಮ ಪರವಾನಗಿ ಹೊಂದಿದ ಕೋವಿಗಳನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿ ಇರಿಸಬೇಕೆಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದ ವಿರುದ್ಧ ಬಂಟ್ವಾಳ ತಾಲೂಕಿನ ರೈತರೋರ್ವರು ಚುನಾವಣಾ ಮತ ಬಹಿಷ್ಕಾರಕ್ಕೆ ಕರೆ ನೀಡಿ‌ ಫ್ಲೆಕ್ಸ್ ಅಳವಡಿಸಿದ್ದಾರೆ.

ಕೃಷಿಕರ ಕೋವಿಯನ್ನು ಪ್ರತಿ ಸಲ ಚುನಾವಣಾ ಸಮಯದಲ್ಲಿ ಪೊಲೀಸ್ ಠಾಣೆಯಲ್ಲಿಡುವುದರಿಂದ ಪ್ರಾಣಿಗಳ ಹಾವಳಿಗೆ ತುತ್ತಾಗಿ ಕೃಷಿ ನಷ್ಟಕ್ಕೆ ಒಳಗಾಗುತ್ತದೆ. ಬಂಟ್ವಾಳ ತಾಲೂಕಿನ ಬಡಗಕಜೆಕಾರು ಮತ್ತು ತೆಂಕಕಜೆಕಾರು ಗ್ರಾಮದ ಎಲ್ಲಾ ಅಪರಾಧ ಇಲ್ಲದ ಕೋವಿ ಬಳಕೆದಾರರು ಚುನಾವಣಾ ಮತ ಬಹಿಷ್ಕರಿಸುವಂತೆ ವಿನಂತಿಸಿ ಬಂಟ್ವಾಳ ತಾ.ಪಂ.ಮಾಜಿ ಅಧ್ಯಕ್ಷರಾದ ಕೆ.ಎ.ಸತೀಶ್ಚಂದ್ರ ಹೊಸಮನೆ ಅವರು ಕೋವಿ ಬಳಕೆದಾರರ ಪರವಾಗಿ ಫ್ಲೆಕ್ಸ್ ಅಳವಡಿಸಿ ಎಚ್ಚರಿಕೆ ನೀಡಿದ್ದಾರೆ.

ಕೋವಿ ಠೇವಣಾತಿ ವಿನಾಯಿತಿಗಾಗಿ ಜಿಲ್ಲಾಧಿಕಾರಿ ನೇತೃತ್ವದ ಸ್ಟೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿದ ಹಾಗೂ ಹೈಕೋರ್ಟ್ ಮೆಟ್ಟಿಲೇರಿದ್ದ ಸುಳ್ಯ ಮತ್ತು ಕಡಬದ ಸುಮಾರು 197 ರೈತರಿಗೆ ವಿನಾಯಿತಿ ನೀಡಿ ಸ್ಟೀನಿಂಗ್ ಕಮಿಟಿ ಮತ್ತು ಹೈಕೋರ್ಟ್ ಆದೇಶ ಮಾಡಿದೆ.

ಆದರೆ ಬಂಟ್ವಾಳ ಪರಿಸರದ ಕೋವಿ ಹೊಂದಿದ ರೈತರು‌ ಯಾರು ಕೂಡ ವಿನಾಯಿತಿ ಕೋರಿ ನ್ಯಾಯಾಲಯದ ಮೋರೆ ಹೋದ ಬಗ್ಗೆ ಸ್ಪಷ್ಟತೆ‌ಯಿಲ್ಲ. ಇದೀಗ ಬಂಟ್ವಾಳದಲ್ಲಿ ಪರವಾನಿಗೆ ಹೊಂದಿರುವ ಕೋವಿದಾರರು ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

 

More from the blog

ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಆದಿತ್ಯವಾರ ಬಂಟ್ವಾಳ ತಾಲೂಕು ಆಚರಣಾ ಸಮಿತಿಯ ವತಿಯಿಂದ ಮಹಾವೀರ ಜಯಂತಿ ಆಚರಿಸಲಾಯಿತು. ತಹಶೀಲ್ದಾರ್ ಅರ್ಚನಾ ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು...

ಪಾದಚಾರಿಗೆ ಬೈಕ್ ಡಿಕ್ಕಿ : ವ್ಯಕ್ತಿ ಸಾವು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು - ಬೆಂಗಳೂರು ಮಧ್ಯೆ ತುಂಬೆ ಎಂಬಲ್ಲಿ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ...

ಕಾಡಿನಲ್ಲಿ ಕೊಳೆತ ತಲೆಬುರುಡೆ, ಚೀಲ ಪತ್ತೆ

ಸುಳ್ಯ: ಕಾಡಿನಲ್ಲಿ ಕೊಳೆತ ತಲೆಬುರುಡೆ ಹಾಗೂ ಚೀಲ ಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ಚಂದ್ರಶೇಖರ್ ಎಂಬುವರು ದೂರು ದಾಖಲಿಸಿದ್ದಾರೆ. ಚಂದ್ರಶೇಖರ್ ಅವರು ಸ್ಥಳೀಯರೊಂದಿಗೆ ಏ. 19 ರಂದು ಕಾಡಿನಿಂದ...

ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಎಸ್.ಎಂ. ಮುಹಮ್ಮದ್ ಅಲಿ ಯವರಿಗೆ ಅಭಿನಂದನೆ

ಬಂಟ್ವಾಳ : ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ಪೂರ್ವಾದ್ಯಕ್ಷ ಎಸ್.ಎಂ. ಮುಹಮ್ಮದ್ ಅಲಿ ಶಾಂತಿ ಅಂಗಡಿ ಅವರನ್ನು ಘಟಕದ ವತಿಯಿಂದ ಅಭಿನಂದಿಸಲಾಯಿತು. ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕಾದ್ಯಕ್ಷ ರಶೀದ್...