ಪುತ್ತೂರು: ಪುತ್ತೂರು ಬೊಳುವಾರು ಬಸ್ ಪ್ರಯಾಣಿಕರ ತಂಗುದಾಣದ ಪಕ್ಕದಲ್ಲಿದ್ದ ಭಾರೀ ಗಾತ್ರದ ಮಾವಿನ ಮರವೊಂದು ಧರಶಾಯಿಯಾಗಿದ್ದು, ಬಿದ್ದ ಮರದಲ್ಲಿದ್ದ ಮಾವಿನ ಕಾಯಿಗಳನ್ನು ಕೊಯ್ಯಲು ಜನ ಮುಗಿ ಬಿದ್ದ ಘಟನೆ ನಡೆಯಿತು.
ಸದಾ ಜನರ ಸಂಪರ್ಕದಲ್ಲಿರುವ ಈ ಸ್ಥಳದಲ್ಲಿ ಮರ ಬಿದ್ದ ಸಂದರ್ಭ ಯಾರೂ ಇಲ್ಲದಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಮರದ ಪಕ್ಕದಲ್ಲೇ ನಿಲ್ಲಿಸಲಾಗಿದ್ದ ಒಂದು ಟೆಂಪೋ ಮತ್ತು ದ್ವಿಚಕ್ರ ವಾಹನಕ್ಕೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.