Friday, April 19, 2024

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು ಗ್ಯಾರಂಟಿ, ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ ಎಂದು ಸರ್ವೋದಯ ಪಕ್ಷದ ರಾಜ್ಯಾಧ್ಯಕ್ಷ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀಪಾಟೀಲ್ ತಿಳಿಸಿದರು.

ಅವರು ಬಿಸಿರೋಡಿನ ಪ್ರೆಸ್‌ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2014 ರ ಲೋಕಸಭಾ ಚುನಾವಣಾ ಪೂರ್ವದಲ್ಲಿ ರೈತರಿಗೆ ಆಶಾದಾಯಕ ಭಾವನೆ ಇತ್ತು. ಬಿಜೆಪಿ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುತ್ತೇವೆ ಎಂಬ ಆಶ್ವಾಸನೆ ನೀಡಿತ್ತು. ರೈತರ ಉತ್ಪನ್ನಗಳಿಗೆ ನ್ಯಾಯಯುತವಾದ ಬೆಲೆ ನೀಡುತ್ತೇವೆ ಸ್ವಾಮಿನಾಥನ್ ವರದಿ ಜಾರಿ ಮಾಡುತ್ತೇವೆ ಎಂದಿದ್ದರು.2024 ರ ಹೊತ್ತಿಗೆ ರೈತರ ಆದಾಯದಲ್ಲಿ ದ್ವಿಗುಣ ಮಾಡುತ್ತೇವೆ ಎಂದು ‌ಅನೇಕ ಭರವಸೆ ನೀಡಿದ್ದರು.

ಮೋದಿಯವರ ಆಡಳಿತದಲ್ಲಿ ಕೃಷಿ ಉತ್ಪನ್ನ ಖರ್ಚು ದುಪ್ಪಟ್ಟು ಮಾಡಿದರು ಎಂದು ಆರೋಪ‌ಮಾಡಿದರು.

ಲಕ್ಷಾಂತರ ರೈತರು ಸ್ವಾಭಿಮಾನಕ್ಕೆ ಹೆದರಿ ಆತ್ಮಹತ್ಯೆ ಮಾಡಿದ್ದಾರೆ.ಕೃಷಿ ವಿರೋಧಿ ಕಾನೂನನ್ನು ತಂದರು.ದೆಹಲಿಯ ಗಡಿಭಾಗದಲ್ಲಿ ಒಂದು ವರ್ಷಕ್ಕೂ ಅಧಿಕ ಕಾಲ ಧರಣಿ ಮಾಡಿದ್ದಾರೆ. ಆದರೆ ರೈತರು ಮಾನವೀಯತೆ ದೃಷ್ಟಿಯಿಂದ ಮಾತನಾಡುವ ಆಶಾಭಾವನೆ ತೋರಿಸಿಲ್ಲ. ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿಯಿಂದ ಕೃಷಿಕರಿಗೆ ತೊಂದರೆಯಾಗಿದೆ ಎಂದು ಆರೋಪ ಮಾಡಿದರು.

ಕೋಮುಭಾವನೆ ಕೆರಳಿಸಿ ಮತ ಪಡೆಯುವ ಬಿಜೆಪಿ ಆಡಳಿತದ ಅವಧಿಯಲ್ಲಿ ಅಭಿವೃದ್ಧಿ ಶೂನ್ಯ.

ದೇಶದ ಅಳಿವು ಉಳಿವಿನ ಪ್ರಶ್ನೆಯ ಜೊತೆ ಕೃಷಿಕರ ಉಳಿವಿನ ಚುನಾವಣೆಯಾಗದೆ ಎಂದು ಕರ್ನಾಟಕ ರಾಜ್ಯ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ರೈತರ ಮತ್ತು ದುಡಿಯುವ ವರ್ಗವನ್ನು ಕಡೆಗಣಿಸಿದ ಬಿಜೆಪಿ ಸರಕಾರವನ್ನು ಕೆಳಗಿಳಿಸುವುದು ನೂರಕ್ಕೆ ನೂರು ಸತ್ಯ. ಬದುಕಿನ ವಿಚಾರಗಳನ್ನು ಬಿಟ್ಟು ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಮತ ಪಡೆಯುವ ಬಿಜೆಪಿಗೆ ಈ ಬಾರಿ ರೈತರು ಬುದ್ದಿ ಕಲಿಸುತ್ತಾರೆ ಎಂದು ತಿಳಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್, ಪ್ರಮುಖರಾದ ಪ್ರೇಮನಾಥ ಶೆಟ್ಟಿ ಬಾಳ್ತಿಲ,ಓಸ್ವಾಲ್ಡ್ ಪೆರ್ನಾಂಡಿಸ್ ಉಪಸ್ಥಿತರಿದ್ದರು.

More from the blog

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...

ನೇತ್ರಾವತಿ ನದಿ ತೀರದ ಕೃಷಿಕರ ಪಂಪ್ ಸೆಟ್ ಗಳ ವಿದ್ಯುತ್ ಸ್ಥಗಿತ : ರೈತರಿಂದ ಪ್ರತಿಭಟನೆ

ಬಂಟ್ವಾಳ: ದ.ಕ.ಜಿಲ್ಲಾಡಳಿತವೂ ಮಂಗಳೂರು ನಗರಕ್ಕೆ ಕುಡಿಯುವ ನೀರು ಕೊರತೆಯಾಗುತ್ತಿದೆ ಎಂದು ನೇತ್ರಾವತಿ ನದಿ ಪಾತ್ರದ ಕೃಷಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತ ಮಾಡಿರುವ ವಿರುದ್ಧ ರೈತರು ಬಂಟ್ವಾಳ ತಾಲೂಕು ಆಡಳಿತ ಸೌಧದ...

ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ : ಮಹಿಳೆ ಗಂಭೀರ

ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಜತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ...