Friday, April 12, 2024

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ ಬೀಸಿತ್ತು. ಶಂಕಿತ ಉಗ್ರರ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ಬಹುಮಾನ ಕೂಡ ಘೋಷಿಸಲಾಗಿತ್ತು. ಆದರೆ ಕೊಲ್ಕತ್ತಾದಲ್ಲಿದ್ದ ಉಗ್ರರು ನಕಲಿ ದಾಖಲೆ ನೀಡಿ ವಾಸ್ತವ್ಯ ಹೂಡಿದ್ದು, ಗುಪ್ತಚರ ಇಲಾಖೆ, ಪಶ್ಚಿಮ ಬಂಗಾಳ, ತೆಲಂಗಾಣ, ಕರ್ನಾಟಕ, ಕೇರಳ ಪೊಲೀಸರ ಸಹಾಯದಿಂದ NIA ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.

ಉಗ್ರರಾದ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜಿಬ್ ಕೋಲ್ಕತ್ತಾ ಹೊರವಲಯದ ಪೂರ್ವ ಮಿಡ್ನಾಪುರ ದಿಘಾ ಎಂಬಲ್ಲಿ ತಂಗಿದ್ದರು. ಎನ್‌ಐಎ ಅಧಿಕಾರಿಗಳು ಉಗ್ರರ ವಾಸ್ತವ್ಯವನ್ನು ಪತ್ತೆ ಹಚ್ಚಿ ರಹಸ್ಯ ಕಾರ್ಯಾಚರಣೆ ಮಾಡಿದ್ದಾರೆ.

ಇಂದು ಬೆಳಗ್ಗಿನ ಜಾವ 2.30ರ ಸುಮಾರಿಗೆ ಎನ್‌ಐಎ ಅಧಿಕಾರಿಗಳು ಉಗ್ರರು ಅಡಗಿದ್ದ ಮನೆ ಮೇಲೆ ದಾಳಿ ಮಾಡಿದ್ದಾರೆ. ನಿದ್ದೆಯಲ್ಲಿದ್ದ ಇಬ್ಬರು ಉಗ್ರರನ್ನು ರೋಚಕ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಕೋಲ್ಕತ್ತಾದಲ್ಲಿ ಇಬ್ಬರನ್ನು ತೀವ್ರ ವಿಚಾರಣೆ ನಡೆಸಿರುವ ಎನ್‌ಐಎ ಅಧಿಕಾರಿಗಳು ಮೊದಲಿಗೆ ಪಶ್ಚಿಮ ಬಂಗಾಳದ ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಇದಾದ ಬಳಿಕ ಎನ್‌ಐಎ ತಂಡ ಉಗ್ರರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...