Friday, April 12, 2024

ಪ್ರಧಾನಿ ರೋಡ್ ಶೋ ಹಿನ್ನೆಲೆ : ಜೇನುಗೂಡು ತೆರೆವುಗೊಳಿಸಲು ಮಂಗಳೂರು ಪೊಲೀಸ್ ಆಯುಕ್ತರ ಆದೇಶ

ಮಂಗಳೂರು: ನಗರದಲ್ಲಿ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆಯಲಿರುವ ಮಾರ್ಗದಲ್ಲಿ ಇರುವ ಎಲ್ಲ ಜೇನುಗೂಡುಗಳನ್ನು ತೆರವುಗೊಳಿಸುವಂತೆ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್‌ ಅವರು ಉಪಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ ಬರೆದಿದ್ದಾರೆ

ನಗರದ ನಾರಾಯಣಗುರು ವೃತ್ತದಿಂದ ನವಭಾರತ್ ಸರ್ಕಲ್‌ವರೆಗಿನ ರೋಡ್ ಶೋ ನಡೆಯುವ ಸ್ಥಳ, ವಾಹನ ನಿಲುಗಡೆ ಸ್ಥಳ, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಹೆಲಿಪ್ಯಾಡ್, ಸೇಫ್ ಹೌಸ್ ಮತ್ತು ಸೇಫ್ ಆಸ್ಪತ್ರೆಗಳಾದ ಎ.ಜೆ. ಆಸ್ಪತ್ರೆ, ವೆನ್ಲಾಕ್ ಆಸ್ಪತ್ರೆ, ಕೆಎಂಸಿ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಕಚೇರಿ, ಎಸ್‌ಡಿಎಂ ಲಾ ಕಾಲೇಜು, ಸರ್ಕ್ಯೂಟ್ ಹೌಸ್ ಮತ್ತು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಣ್ಯರು ಸಂಚರಿಸುವ ಕಾರ್ಯಕ್ರಮದ ಸ್ಥಳದವರೆಗಿನ ಎಲ್ಲ ಮಾರ್ಗಗಳಲ್ಲಿ ಈ ಕ್ರಮ ವಹಿಸಬೇಕು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ರೋಡ್ ಶೋ ನಡೆಯಲಿರುವ ರೂಟ್ ಮ್ಯಾಪ್ ಅನ್ನು ಬಿಜೆಪಿ ಸಿದ್ಧಪಡಿಸಿದೆ. ಇದರ ಪ್ರಕಾರ ನಗರದ ನಾರಾಯಣ ಗುರು ವೃತ್ತದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಪ್ರಾರಂಭವಾಗುವ ರೋಡ್ ಶೋ ಲಾಲ್ ಬಾಗ್, ಪಿವಿಎಸ್ ವೃತ್ತದ ಮಾರ್ಗವಾಗಿ ನವಭಾರತ್ ಸರ್ಕಲ್ ಮೂಲಕ ಕೆ.ಎಸ್‌.ರಾವ್ ರಸ್ತೆಯಲ್ಲಿ ಸಾಗಿ, ಹಂಪನಕಟ್ಟೆಯಲ್ಲಿ ಸಮಾಪ್ತಿಗೊಳ್ಳಲಿದೆ. ಈ ಮಾರ್ಗದಲ್ಲಿ ಭದ್ರತಾ ಅಧಿಕಾರಿಗಳ ಜೊತೆಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಕಾಲ್ನಡಿಗೆಯಲ್ಲಿ ಸಾಗಿ ಪರಿಶೀಲಿಸಿದರು.

More from the blog

ಗುದನಾಳದಲ್ಲಿದ್ದ 58 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು: ದಮ್ಮಾಮ್‌ನಿಂದ ಆಗಮಿಸುತ್ತಿದ್ದ ಪ್ರಯಾಣಿಕರೊಬ್ಬರಿಂದ 58,78,880 ರೂಪಾಯಿ ಮೌಲ್ಯದ 812 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ವಾಡಿಕೆಯ ಮೆಟಲ್ ಡಿಟೆಕ್ಟರ್ ಪರೀಕ್ಷೆಯ ಸಮಯದಲ್ಲಿ, ಪ್ರಯಾಣಿಕರ ಸೊಂಟದಿಂದ ಬೀಪ್...

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ. ಸಂಜೆ 5 ಗಂಟೆ...

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ: ಏಪ್ರಿಲ್​ 18 ರವರೆಗೆ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಆದರೆ ಇದೀಗ ವಿಪರೀತ ಸೆಕೆ...

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ನಕಲಿ ಸುದ್ದಿ ಪ್ರಕಟ : ಕ್ರಮ ಕೈಗೊಳ್ಳುವಂತೆ ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಪೊಲೀಸ್ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕೋಮು ಭಾವನೆಯ ಹೇಳಿಕೆ ನೀಡಿದ್ದಾರೆಂಬ ನಕಲಿ ಸುದ್ದಿಯನ್ನು ವಾಟ್ಸಾಪ್ ಗ್ರೂಪ್ ಗಳಲ್ಲಿ ಪ್ರಚಾರ ಮಾಡುತ್ತಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ...