Friday, April 5, 2024

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ NDRF, SDRF ತಂಡಗಳು ನಿನ್ನೆಯಿಂದಲೇ ರಕ್ಷಣಾ ಕಾರ್ಯಾಚರಣೆ ನಡೆಸಿ ಸಾತ್ವಿಕ್​ನನ್ನು ಹೊರಗೆ ತೆಗಿದಿದ್ದಾರೆ. ಇದರಿಂದ ಮಗುವಿನ ಪೋಷಕರು, ಸಂಬಂಧಿಗಳು ಹಾಗೂ ಗ್ರಾಮಸ್ಥರೆಲ್ಲ ಫುಲ್ ಖುಷಿಯಾಗಿದ್ದಾರೆ.

ನಿನ್ನೆ ಸಂಜೆ ಆಟವಾಡುತ್ತಿದ್ದ ಕಂದ, ಅರಿವಿಗೆ ಬಾರದಂತೆ ಕೊಳವೆ ಬಾವಿಗೆ ಜಾರಿಬಿಟ್ಟಿದ್ದ. ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳೀಯ ಪೊಲೀಸರು, ಅಗ್ನಿಶಾಮ ಸಿಬ್ಬಂದಿ, ಎಸ್​ಡಿಆರ್​ಎಫ್, ಎನ್​ಡಿಆರ್​ಎಫ್​, ಪರಿಣಿತರ ತಂಡ ಸ್ಥಳಕ್ಕೆ ದೌಡಾಯಿಸಿತ್ತು. ಹಗಲು ರಾತ್ರಿ ಎನ್ನದೇ ಶತತ ಕಾರ್ಯಾಚರಣೆ ನಡೆಸಿತು. ಸಂಜೆ 6 ಗಂಟೆ ಸುಮಾರಿಗೆ ಬಿದ್ದಿದ್ದರಿಂದ ಕತ್ತಲು ಆವರಿಸಿಬಿಟ್ಟಿತ್ತು. 16 ಅಡಿ ಆಳದ ಕೊಳವೆ ಬಾವಿ ಆಗಿರೋದ್ರಿಂದ ರಕ್ಷಣಾ ಸಿಬ್ಬಂದಿಗೆ ಎಲ್ಲೋ ಒಂದು ಕಡೆ ಭರವಸೆ ಮೂಡಿತ್ತು. ಅದರಂತೆ ಸತತ ಪ್ರಯತ್ನದ ಫಲವಾಗಿ, 20 ಗಂಟೆಗಳ ಕಾಲ ನಡೆದ ಆಪರೇಷನ್​ ಯಶಸ್ವಿ ಮಾಡಿದ್ದಾರೆ. ಮಗುವನ್ನು ಜೀವಂತವಾಗಿ ಹೊರ ತೆಗೆದಿದ್ದು, ವೈದ್ಯಕೀಯ ಚಿಕಿತ್ಸೆಗೆ ಮಗುವನ್ನು ಕಳುಹಿಸಲಾಗಿದೆ.

More from the blog

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಬುಧವಾರ ನಾಮಪತ್ರ ಸಲ್ಲಿಸಿದರು. ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...

ಯದುವೀರ್​​ ಒಡೆಯರ್​ ಬಳಿ ಇರೋ ಆಸ್ತಿ ಎಷ್ಟು ಗೊತ್ತಾ…?

ಮೈಸೂರು : ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಮೈಸೂರು ಒಡೆಯರ್‌ ಆಗಿರುವ ಯದುವೀರ್‌ ಈ ವೇಳೆ ಸುಮಾರು 5 ಕೋಟಿ ರೂ....