Wednesday, April 10, 2024

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು ಆಗ ಮಾತ್ರ ಶೈಕ್ಷಣಿಕವಾಗಿ ಹಾಗೂ ಭೌತಿಕ ಅಭಿವೃದ್ಧಿ ಪಡಿಸಲು ಸಾಧ್ಯಗುತ್ತದೆ ಎಂದು ಸಿವಿಲ್ ಇಂಜಿನಿಯರ್ ಲಿಂಗಪ್ಪ ಗೌಡ ಹೇಳಿದರು.

ಅವರು ಬಂಟ್ವಾಳ ತಾಲೂಕು ನೆಟ್ಲ ಮೂಡ್ನೂರು ಗ್ರಾಮದ ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇಲ್ಲಿ 2023-2024 ನೇ ಸಾಲಿನ ಕೊನೆಯ ಹಂತದ ಸಮುದಾಯದತ್ತ ಹಾಗೂ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಏನ್ ಎಮ್ ಪಿ ಟಿ ಯ ಸಿ ಎಸ್ ಆರ್ ನಿಧಿಯಿಂದ ಶಾಲೆಯಲ್ಲಿ ಸುಮಾರು 5 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಶೌಚಾಲಯವನ್ನು ಮಕ್ಕಳಿಂದ ಉದ್ಘಾಟಿಸಲಾಯಿತು.

2023 -2024 ಸಾಲಿನ ವರ್ಷದಲ್ಲಿ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪ್ರತಿಭೆಗಳನ್ನು ಗುರುತಿಸಿ ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಶಾಲೆಯಿಂದ ಕ್ಲಸ್ಟರ್ ಹಾಗೂ ತಾಲೂಕು ಮಟ್ಟದಲ್ಲಿ ವಿಜೇತರಾದ ಮಕ್ಕಳನ್ನು ಗುರುತಿಸಿ ಸನ್ಮಾನಿಸಲಾಯಿತು.

ಶಾಲೆಗೆ ಸಹಕಾರ ನೀಡಿದ ಮಹಾನಿಯರನ್ನು, ಶಾಲಾ ಶಿಕ್ಷಕರನ್ನು, ಅಡುಗೆ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಪೋಷಕರೊಂದಿಗೆ ಮುಕ್ತವಾಗಿ ಚರ್ಚಿಸಿ ಮುಂದಿನ ವರ್ಷದಿಂದ ಶಾಲೆಯಲ್ಲಿ ಯುಕೆಜಿ ತರಗತಿ ಪ್ರಾರಂಭಿಸುವ ಬಗ್ಗೆ ತೀರ್ಮಾನಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಮಲ್ಲಿಕಾ ಗಣೇಶ್ಆಚಾರ್ಯ, ಉಪಾಧ್ಯಕ್ಷ ಪ್ರಸಾದ್ ಆಚಾರ್ಯ, ಶಾಲಾ ಎಲ್ಲಾ ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಿರುವ ಅನುಪ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಡಾ ತ್ರಿವೇಣಿ ರಮೇಶ್ ಸ್ವಾಗತಿಸಿ ಗೌರವ ಶಿಕ್ಷಕಿ ದೀಕ್ಷಾ 2023-24 ನೇ ಸಾಲಿನ ವರದಿಯನ್ನು ವಾಚಿಸಿ, ಸಹ ಶಿಕ್ಷಕ ಉದಯ ಚಂದ್ರ ಬಹುಮಾನಿತರ ಪಟ್ಟಿ ವಾಚಿಸಿ, ಗೌರವ ಶಿಕ್ಷಕಿ ಅಕ್ಷತಾ ಕೆ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮಕ್ಕಳು, ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

More from the blog

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...

ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ ನಡೆಯಿತು. ಬುಡೋಳಿ ಏನಾಜೆ ಬಿಲಾಲ್ ಮಸ್ಜಿದ್ ಏನಾಜೆ ಬುಡೋಳಿಯಲ್ಲಿ ಮಸೀದಿ ಖತೀಬರಾದ ಅಬ್ದುಲ್ ಮಜೀದ್ ದಾರಿಮೀ ಉಸ್ತಾದ್ ಜುಮ್ಮಾ ನೇತೃತ್ವ ವಹಿಸಿ ಈದ್ ಸಂದೇಶವನ್ನು...

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...