Tuesday, April 9, 2024

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ.

ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ ಅಂದರೆ ಏಪ್ರಿಲ್ 10 ರಂದು ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಧ್ಯಮಗೋಷ್ಠಿ ಕರೆದಿದ್ದು ಈ ಬಗ್ಗೆ ಅಧಿಕೃತ ಮಾಹಿತಿ ನೀಡಲಿದೆ. 2024ರ ಮಾರ್ಚ್​ 1 ರಿಂದ 22ರ ವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ- 1 ಅನ್ನು ನಡೆಸಲಾಗಿತ್ತು. ಈ ಬಾರಿ 6.98 ಲಕ್ಷವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಈ ವರ್ಷದಿಂದಲೇ 3 ಬಾರಿ ಪರೀಕ್ಷೆ ಬರೆಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ..

ಫಲಿತಾಂಶ ಪರಿಶೀಲಿಸುವುದು ಹೇಗೆ ಮತ್ತ ಎಲ್ಲಿ?

http://karresults.nic.in ಅಥವಾ http://pue.kar.nic ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ.

ಮುಖಪುಟದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.

ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಅಂದರೆ ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ.

ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್​​ ಮೇಲೆ ಕಾಣಿಸುತ್ತದೆ.

ಬಳಿಕ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ರಾಜ್ಯದಲ್ಲಿ ಈ ಸಲ ಒಟ್ಟು 6,98,627 ವಿದ್ಯಾರ್ಥಿಗಳು ಎಕ್ಸಾಂ ಬರೆಯಲು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 3,30,644 ವಿದ್ಯಾರ್ಥಿಗಳು, 3,67,980 ವಿದ್ಯಾರ್ಥಿನಿಯರು ಬರೆದಿದ್ದಾರೆ.

More from the blog

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...