Monday, April 29, 2024

ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಏಪ್ರಿಲ್ 22ರಂದು ಎಸ್​ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ ಆಗಿದ್ದರು. ಇದೀಗ ಏಪ್ರಿಲ್ 29 ರಂದು ಎಸ್​ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆದ್ರೆ, ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಇನ್ನೂ ತಿಳಿದುಬಂದಿಲ್ಲ.

More from the blog

ಜೆಡಿಎಸ್ ಪಕ್ಷದಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್‌.ಡಿ ದೇವೇಗೌಡರು ಮಹತ್ವದ ಆದೇಶ ನೀಡಿದ್ದಾರೆ. ಹಾಸನದಲ್ಲಿ ಹರಿದಾಡಿದ ಅಶ್ಲೀಲ...

ಕೆದಂಬಾಡಿ: ಯುವಕ ನಾಪತ್ತೆ

ಪುತ್ತೂರು: ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆರೆಮೂಲೆ ದಿ.ಸಂಖಪ್ಪ ಪೂಜಾರಿ ಅವರ ಪುತ್ರ ದಿವಾಕರ ನಾಪತ್ತೆಯಾದವರು. ಅರಿಯಡ್ಕ ಗ್ರಾಮದ ಕೆರೆಮೂಲೆಯವರಾದ ದಿವಾಕರ ಅಡುಗೆ ಕೆಲಸಕ್ಕೆ ಸಹಾಯಕರಾಗಿ ಹೋಗುತ್ತಿದ್ದು,...

3 ವಾರದಲ್ಲಿ ಬೆಂಗಳೂರಿನ 7,324 ಮಂದಿಗೆ ಅತಿಸಾರ ಸಮಸ್ಯೆ : ಮುನ್ನೆಚ್ಚರಿಕೆ ಏನು…?

ಬಿರು ಬಿಸಿಲಿನ ತಾಪಕ್ಕೆ ಮನೆಯಿಂದ ಹೊರ ಹೋಗಲು ಕೂಡ ಜನರು ಪರದಾಡುವಂತಾಗಿದೆ. ದಿನ ಕಳೆದಂತೆ ಈ ಬಿಸಿ ಶಾಖ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಏಪ್ರಿಲ್‌ನಲ್ಲಿ ಎರಡನೇ ಬಾರಿ ಬರೋಬ್ಬರಿ 38 ಡಿಗ್ರಿ ಸೆಲ್ಸಿಯಸ್...

ಬಿಗ್ ಶಾಕ್..! ಮತ್ತೆ ಹೆಚ್ಚಾಗುತ್ತಿದೆ ಬಿರು ಬಿಸಿಲು

ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯದಲ್ಲಿ ಬಿರು ಬಿಸಿಲಿನ ತಾಪಮಾನ ಜಾಸ್ತಿಯಾಗುತ್ತಿದೆ. ಇಂದು ರಾಜ್ಯ ರಾಜಧಾನಿ ಬೆಂಗಳೂರಲ್ಲಿ 36 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ನಾಳೆ, ನಾಡಿದ್ದು 37, 38 ಡಿಗ್ರಿ ಉಷ್ಣಾಂಶ ದಾಖಲಾಗುವ ಮುನ್ಸೂಚನೆಗಳಿವೆ. ಬಿಸಿಲಿನ...