Friday, April 12, 2024

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ.

ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ.

ದಾರುಸ್ಸಲಾಮ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಗುರುವಾರ ಮನೆ ಮಂದಿಯೊಂದಿಗೆ ಹೆಂಗವಳ್ಳಿ ಯ ಖಾಸಗಿ ರೆಸಾರ್ಟ್ ಸ್ವಿಮಿಂಗ್ ಫುಲ್ ನ ನೀರಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆ. ಸದ್ಯ ಈ ಸಂಬಂಧ ಬಾಲಕನ ಪೋಷಕರು ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್ ವಿರುದ್ಧ ದೂರು ದಾಖಲಿಸಿದ್ದಾರೆ.

ಮೃತ ವಿದ್ಯಾರ್ಥಿನಿ ತಂದೆ, ತಾಯಿ ಅಪಾರ ಬಂಧು ಬಳಗವನ್ನು ಅಗಲಿದ್ದಾನೆ.

More from the blog

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...