Sunday, April 7, 2024

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು

ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ ಹೇಳಿದರು.

ಅವರು ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆಯಲ್ಲಿ ಆಶ್ರೀರ್ವಚನ ನೀಡಿದರು.

ದೇವಸ್ಥಾನದ ಕಾರ್ಯದಲ್ಲಿ ತೊಡಗಿ, ಬ್ರಹ್ಮಕಲಶೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶ್ರಮಿಸಿದ ಕಾರ್ಯಕರ್ತರನ್ನು ಗುರುತಿಸಿ, ಸಮಿತಿಯ ಜವಬ್ದಾರಿಯನ್ನು ಮಾಡಿರುವುದು ಸಂತಸದ ವಿಚಾರವಾಗಿದೆ.

ಮನುಷ್ಯ ಬೇರೆ ಬೇರೆ ರೀತಿಯಲ್ಲಿ ಪಾಪವನ್ನು ಮಾಡಿರುತ್ತಾರೆ, ತಿಳಿದು,ತಿಳಿಯದೆ ಮಾಡಿರುವ ಪಾಪವನ್ನು ನಿವಾರಿಸಿಕೊಳ್ಳಲು ದೇವಸ್ಥಾನಕ್ಕೆ ಹೋಗಬೇಕು ಎಂದು ಅವರು ತಿಳಿಸಿದರು.

ಉತ್ತಮ ಭಾವನೆ,ಕಲ್ಪನೆಯಿಂದ ದೇವರ ದರ್ಶನ ಮಾಡಿದಾಗ ದೇವಸ್ಥಾನದ ಪಾವಿತ್ರ್ಯತೆ ಉಳಿಯುತ್ತದೆ.

ದೇವಸ್ಥಾನದ ಬೆಳವಣಿಗೆಗೆ ಸರಕಾರದ ಅನುದಾನವನ್ನು ಬಳಸುವುದರ ಜೊತೆಗೆ ಗ್ರಾಮದ ಜನರ ಸಹಕಾರ ಅತೀ ಅಗತ್ಯವಾಗಿದೆ.

ದೇವಸ್ಥಾನವನ್ನು ಶುಧ್ದವಾಗಿ ಇರಿಸುವ ಜೊತೆಗೆ ಭಕ್ತರ ಮನಸ್ಸು ಶುಧ್ದಿಯಾಗಬೇಕು. ನಮ್ಮ ಎಂಬ ಭಾವನೆಯಿಂದ ಒಂದಾಗಿ ದೇವಸ್ಥಾನದ ಏಳಿಗೆಗೆ ಪ್ರಯತ್ನಿಸೋಣ ಎಂದು ತಿಳಿಸಿದರು.

ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಚೌಟ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಶುಭಹಾರೈಸಿದರು,

ಉದ್ಯಮಿ ಜಯಪ್ರಕಾಶ್ ತುಂಬೆ, ಉದ್ಯಮಿ ಉಮೇಶ್ ಶೆಟ್ಟಿ ಬರ್ಕೆ, ಉದ್ಯಮಿ ಚಂದ್ರಹಾಸ ಪಲ್ಲಿಪಾಡಿ, ಕಲಾವಿದ ತೋನ್ಸೆ ಪುಷ್ಕಲ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತುಂಬೆ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಸ್ವಾಗತಿಸಿದರು. ಜಗನ್ನಾಥ ಶೆಟ್ಟಿ ತುಂಬೆ ವಂದಿಸಿದರು

ಕಿಶೋರ್ ಭಂಡಾರಿ ಬೆಳ್ಳೂರು ಕಾರ್ಯಕ್ರಮ ನಿರೂಪಿಸಿದರು.

ಮಹಾಲಿಂಗೇಶ್ವರ ದೇವಸ್ಥಾನ ತುಂಬೆಯಲ್ಲಿ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ಶತರುದ್ರ ಸಹಿತ ದೃಡಕಲಶಾಭಿಷೇಕ ನಡೆಯಿತು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಸ್ವಯಂಸೇವಕರಿಗೆ ಕೃತಜ್ಞತೆಯನ್ನು ನೀಡಲಾಯಿತು.

More from the blog

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...