Friday, April 12, 2024

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ ಅವಧಿಯಲ್ಲೇ ಬಂಗಾರದ ದರ ಸುಮಾರು ಹತ್ತು ಸಾವಿರಗಳಷ್ಟು ಏರಿಕೆಯಾಗಿದ್ದು ಬಂಗಾರದ ಹೂಡಿಕೆದಾರರ ಮುಖದಲ್ಲಿ ಮಂದಹಾಸ ಮೂಡಿಸಿದರೆ ಚಿನ್ನಾಭರಣ ಕೊಳ್ಳಬಯಸುವವರ ಜೇಬಿಗೆ ಕತ್ತರಿ ಹಾಕಿದಂತಾಗಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ…

ಒಂದು ಗ್ರಾಂ ಚಿನ್ನ (1GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6720

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,331

ಎಂಟು ಗ್ರಾಂ ಚಿನ್ನ (8GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,760

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,648

ಹತ್ತು ಗ್ರಾಂ ಚಿನ್ನ (10GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 67,200

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 73,310

ನೂರು ಗ್ರಾಂ ಚಿನ್ನ (100GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,72,000

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,33,100

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 73,310 ಆಗಿದ್ದರೆ ಚೆನ್ನೈ 74,240 ಮುಂಬೈ 73,310 ಹಾಗೂ ಕೋಲ್ಕತ್ತಾದಲ್ಲಿ 73,310 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 73,460 ರೂ. ಆಗಿದೆ.

ಇಂದಿನ ಬೆಳ್ಳಿ ದರ 

ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 842.50 ರೂ. 8425 ಹಾಗೂ ರೂ. 84,250 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 90,000 ಆಗಿದ್ದರೆ, ಮುಂಬೈನಲ್ಲಿ ರೂ. 86,500 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 86,500 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 86,500 ಆಗಿದೆ.

More from the blog

ಪ್ರಧಾನಿ ರೋಡ್ ಶೋ ಹಿನ್ನೆಲೆ : ಜೇನುಗೂಡು ತೆರೆವುಗೊಳಿಸಲು ಮಂಗಳೂರು ಪೊಲೀಸ್ ಆಯುಕ್ತರ ಆದೇಶ

ಮಂಗಳೂರು: ನಗರದಲ್ಲಿ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆಯಲಿರುವ ಮಾರ್ಗದಲ್ಲಿ ಇರುವ ಎಲ್ಲ ಜೇನುಗೂಡುಗಳನ್ನು ತೆರವುಗೊಳಿಸುವಂತೆ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್‌ ಅವರು ಉಪಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ...

ಗುದನಾಳದಲ್ಲಿದ್ದ 58 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು: ದಮ್ಮಾಮ್‌ನಿಂದ ಆಗಮಿಸುತ್ತಿದ್ದ ಪ್ರಯಾಣಿಕರೊಬ್ಬರಿಂದ 58,78,880 ರೂಪಾಯಿ ಮೌಲ್ಯದ 812 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ವಾಡಿಕೆಯ ಮೆಟಲ್ ಡಿಟೆಕ್ಟರ್ ಪರೀಕ್ಷೆಯ ಸಮಯದಲ್ಲಿ, ಪ್ರಯಾಣಿಕರ ಸೊಂಟದಿಂದ ಬೀಪ್...

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ. ಸಂಜೆ 5 ಗಂಟೆ...

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ: ಏಪ್ರಿಲ್​ 18 ರವರೆಗೆ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಆದರೆ ಇದೀಗ ವಿಪರೀತ ಸೆಕೆ...