Wednesday, April 17, 2024

ವೋಟ್ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ಹಿರಿಯ ಜೀವ

ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ.

ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ ಮೃತಪಟ್ಟವರು.

ಯಶೋಧಾ ಅವರು ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿಯಾಗಿದ್ದಾರೆ. ಇವರು ಹಿರಿಯ ನಾಗರೀಕರ ಕಾರ್ಯಕ್ರಮದಡಿ ಮನೆಯಿಂದಲೇ ಮತದಾನ ಮಾಡಿದ್ದರು. ಆದರೆ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಾರೆ.

ವೃದ್ಧೆಗೆ ಮತದಾನ ಮಾಡುವುದಕ್ಕೂ ಮೊದಲೇ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ ವೋಟ್ ಮಾಡಿಯೇ ಆಸ್ಪತ್ರೆ ಹೋಗೋಣ ಎಂದು ವೃದ್ಧೆ ನಿಶ್ಚಯ ಮಾಡಿದ್ದರು. ಅದರಂತೆ ವೋಟ್ ಮಾಡಿದ ಮಹಿಳೆ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೂ ಚಿಕಿತ್ಸೆಗೆ ಸ್ಪಂದಿಸದೇ ವೃದ್ಧೆ ಮೃತಪಟ್ಟಿದ್ದಾರೆ.

More from the blog

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...

ಬಂಟ್ವಾಳದ ಹಿಂದೂ ಯುವ ಸೇನಾ ಮುಖಂಡನಿಗೆ ಚೂರಿ ಇರಿದ ದುಷ್ಕರ್ಮಿಯನ್ನು ಶೀಘ್ರ ಬಂದಿಸಿ, ಕಠಿನ ಶಿಕ್ಷೆ ವಿಧಿಸುವಂತೆ ಹಿಂದೂ ಯುವ ಸೇನೆ ಆಗ್ರಹ

ಬಂಟ್ವಾಳ: ಹಿಂದೂ ಯುವ ಸೇನೆ ಬಂಟ್ವಾಳ ತಾಲೂಕು ಘಟಕದ ಮಾಜಿ ಅಧ್ಯಕ್ಷ ಪುಷ್ಪರಾಜ್ ರವರು ದುಷ್ಕರ್ಮಿಯಿಂದ ಚೂರಿ ಇರಿತಕ್ಕೊಳಗಾಗಿರುವುದನ್ನು ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿ, ಬಂಟ್ವಾಳ ತಾಲೂಕು ಘಟಕ ಖಂಡಿಸುತ್ತದೆ. ಅಮಾಯಕ ಪುಷ್ಪರಾಜ್...

ಪ್ರಧಾನಿ ಮೋದಿಯವರೇ.. ದಕ್ಷಿಣ ಕನ್ನಡಕ್ಕೆ ನೀವು ಕೊಟ್ಟದ್ದೆಷ್ಟು- ಸಿಎಂ ಪ್ರಶ್ನೆ

ಬೆಂಗಳೂರು: “ನನ್ನ ತೆರಿಗೆ ನನ್ನ ಹಕ್ಕು" ಅಭಿಯಾನದ ಮುಂದುವರಿದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಚುನಾವಣ ರ್‍ಯಾಲಿ ನಡೆಸಿದ ದಕ್ಷಿಣ ಕನ್ನಡಕ್ಕೆ ತಮ್ಮ ಕೊಡುಗೆಯ ಲೆಕ್ಕ ಕೊಡುವಂತೆ ಕಾಂಗ್ರೆಸ್‌ ಕೇಳಿದೆ. ಪ್ರಧಾನಿ ನರೇಂದ್ರ ಮೋದಿ...