Saturday, April 20, 2024

ಸೈಕಲ್ ರಿಪೇರಿಗೆ ಹಟ : ಬಾಲಕ ಆತ್ಮಹತ್ಯೆ

ಉಪ್ಪಿನಂಗಡಿ: ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ.

ಮೂಲತಃ ಪಂಜದ ಅಳ್ಪೆಬನದ ನಿವಾಸಿ. ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ನಂದನ್ ಆತ್ಮಹತ್ಯೆ ಮಾಡಿಕೊಂಡ ಬಾಲಕ.

ರೋಹಿತ್ ಕೆಲವರ್ಷಗಳ ಹಿಂದೆ ನಿಧನರಾಗಿದ್ದು, ಪತಿ ನಿಧನ ಬಳಿಕ ರಮ್ಯಾ ತವರು ಉಪ್ಪಿನಂಗಡಿ ದುಗಲಾಡಿಯಲ್ಲೇ ಇದ್ದು ಮಕ್ಕಳು ಅಲ್ಲೇ ಶಾಲೆ ಕಲಿಯುತ್ತಿದ್ದ. ಶುಕ್ರವಾರದಂದು ತನ್ನ ನಾಲ್ವರು ಗೆಳೆಯರೊಂದಿಗೆ ಆಟವಾಡುತ್ತಿದ್ದ ನಂದನ್ ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದ.

ಮನೆಯ ಇನ್ವರ್ಟರ್ ರಿಪೇರಿಗೆ ಬಂದಿರುವುದರಿಂದ ಇವತ್ತು ಬೇಡ ನಾಳೆ ಸೈಕಲ್ ರಿಪೇರಿ ಮಾಡಿಕೊಡಲಾಗುವುದೆಂದು ಮನೆಯವರು ತಿಳಿಸಿದ್ದರೆನ್ನಲಾಗಿದೆ. ಇದರಿಂದ ಸಮಾಧಾನ ಹೊಂದಿದ್ದ. ಆದರೆ ಆತ ಸ್ವಲ್ಪ ಹೊತ್ತಿನ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿಕೊಂಡು ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

More from the blog

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ...

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...