Friday, April 5, 2024

ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನೀರಿಗಾಗಿ ಪ್ರತಿಭಟನೆ 

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೩ನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಕೊಡ, ಬಕೆಟ್ ಹಿಡಿದು ವಿಟ್ಲ ಮೂಡ್ನೂರು ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಬುಧವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಂಚಾಯತ್ ಮಾಜಿ ಅಧ್ಯಕ್ಷ ರಮೇಶ್ ನಾಯಕ್ ಅವರು ಇಲ್ಲಿಯ ನೀರಿನ ಸಮಸ್ಯೆಗಳ ಬಗ್ಗೆ ಅಭಿವೃದ್ಧಿ ಅಧಿಕಾರಿಯವರ ಗಮನಕ್ಕೆ ತಂದಿದ್ದು, ಬಳಿಕ ಅವರು ಅಂತರ್ಜಲ ಕೊರತೆ ಇರುವ ಜಾಗದಲ್ಲಿಯೇ ಕೊಳವೆ ಬಾವಿ ಕೊರೆಸಿದ್ದಾರೆ. ಆದರೆ ಅಲ್ಲಿ ನೀರು ಸಿಕ್ಕಿಲ್ಲ. ನಮ್ಮ ಮಾತಿಗೆ ಬೆಲೆ ಇಲ್ಲಂತಾಗಿದೆ. ಇದೀಗ ನೀರಿಗಾಗಿ ನಾವು ಪರದಾಟ ನಡೆಸುತ್ತಿದ್ದೇವೆ. ತಕ್ಷಣವೇ ನಮಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಗ್ರಾಮಸ್ಥೆ ನಳಿನಿ ಅವರು ಮಾತನಾಡಿ ಕೆಮನಾಜೆ, ಶಾಂತಿಯಡ್ಕ, ಹಲಸಿನಕಟ್ಟೆ, ಬೇರಿಕೆ ಮತ್ತು ಪಿಲಿಂಜ ಭಾಗದ ಪರಿಸರವಾಸಿಗಳು ನೀರಿಲ್ಲದೇ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಸುತ್ತಮುತ್ತಲಿನಲ್ಲಿ ಬಾವಿ ಕೂಡ ಇಲ್ಲ. ನೀರಿಗಾಗಿ ೨ ಕಿ.ಮೀ ದೂರ ಹೋಗಬೇಕು. ಕೊಳವೆ ಬಾವಿಗೆ ಹಾಕಿದ ಪಂಪ್ ಹಾಳಾಗಿದೆ ಎಂದು ಹೇಳಿದರೂ ಯಾರೂ ಇತ್ತ ಕಡೆ ಸುಳಿಯುವುದಿಲ್ಲ ಎಂದು ಆರೋಪಿಸಿದರು.

ಎಲ್ಯಣ್ಣ ಪೂಜಾರಿ ಮೈರುಂಡ ಮಾತನಾಡಿ ಈ ಭಾಗದಲ್ಲಿ ನೀರಿಗಾಗಿ ಬಡಪಾಯಿ ಜನರು ನಿರಂತರ ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಮ ಪಂಚಾಯಿತಿನವರು ವಾಹನದಲ್ಲಿ ನೀರು ಸರಬರಾಜು ಮಾಡುತ್ತಿದ್ದು, ಅದು ನಮಗೆ ಏನೂ ಸಾಕಾಗುತ್ತಿಲ್ಲ. ಚುನಾವಣೆಯಲ್ಲಿ ಗೆದ್ದ ಕೆಲವು ಸದಸ್ಯರು ಜೀವ ಇಲ್ಲದಂತೆ ವರ್ತಿಸುತ್ತಿದ್ದಾರೆ. ತಕ್ಷಣವೇ ಇಲ್ಲಿಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಜಯ ಕೆ. ಮತ್ತು ಅಧ್ಯಕ್ಷ ಪುನೀತ್ ಮಾಡತ್ತಾರು ಅವರು ಪ್ರತಿಭಟನಾಕಾರರ ಜತೆ ಮಾತುಕತೆ ನಡೆಸಿ ಹಾಳಾಗಿರುವ ಪಂಪ್ ಸರಿಪಡಿಸಿ ನೀರಿನ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

ಈ ಸಂದರ್ಭ ರಾಮಣ್ಣ ಪಿಲಿಂಜ, ಲೋಹಿತ್ ಪೂಜಾರಿ, ನವೀನ್ ಗೌಡ, ಪದ್ಮಾವತಿ , ಶೀನ ಮೂಲ್ಯ, ಸೀತಾ, ಗೀತಾ ರುಕ್ಮಯ್ಯ ಗೌಡ, ತಾರಾನಾಥ ಹಾಗೂ ಕೃಷ್ಣಪ್ಪ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಜಯ ಕೆ. ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಇಲ್ಲಿರುವ ನೀರಿನ ಸಮಸ್ಯೆಯನ್ನು ಮನಗಂಡು ಎರಡು ದಿನಗಳಿಗೊಮ್ಮೆ ೯ ಪಿಕಪ್‌ಗಳಲ್ಲಿ ನೀರು ಸರಬರಾಜು ಮಾಡಲಾಗುತ್ತಿದೆ. ೧೮ ಸಾವಿರ ಲೀಟರ್ ನೀರು ಕೊಡಲಾಗುತ್ತಿದೆ. ಕೊಳವೆ ಬಾವಿ ಕೊರೆದರೂ ನೀರು ಸಿಗುತ್ತಿಲ್ಲ. ಹಳೆಯ ಕೊಳವೆಬಾವಿಗೆ ಹಾಕಿರುವ ಕಬ್ಬಿಣದ ತುಂಡು ತೆಗೆಯಲು ತಂಡವನ್ನು ಆಹ್ವಾನಿಸಲಾಗಿದೆ. ಖಾಸಗಿ ವ್ಯಕ್ತಿಯೊಬ್ಬರ ಕೊಳವೆ ಬಾವಿಯಿಂದ ನೀರು ನೀಡಲು ಸಹಕಾರಿ ಕೋರಲಾಗಿದ್ದು, ಜನರಿಗೆ ನೀರಿನ ಸಮಸ್ಯೆ ಬಾರದ ರೀತಿಯಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...