Saturday, April 20, 2024

ವಿಟ್ಲ ವ್ಯಾಪ್ತಿಯ ಪ್ರಮುಖ ಧಾರ್ಮಿಕ ಕೇಂದ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ

ವಿಟ್ಲ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶನಿವಾರ ವಿಟ್ಲದ ವಿವಿಧ ಕಡೆಗಳಿಗೆ ಭೇಟಿ ನೀಡಿದರು.

ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಕ್ಕೆ ಭೇಟಿ ನೀಡಿದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದುಕೊಂಡರು.

ಬಳಿಕ ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಆ ನಂತರ ಪೆರುವಾಯಿ ಶೋಕಮಾತಾ ಚರ್ಚ್’ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

More from the blog

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...